ವಿಜಯಪುರ -
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯನ್ನು ಸಡಗರ ಸಂಭ್ರಮ ದಿಂದ ಆಚರಣೆ ಮಾಡಲಾಯಿತು ಹೌದು ವಿಜಯಪುರ ಜಿಲ್ಲೆಯ ಮದಭಾವಿ ಸರ್ಕಾರಿ ಶಾಲೆ ಯಲ್ಲಿ ಈ ಒಂದು ಕಾರ್ಯಕ್ರಮ ಗಳನ್ನು ಮಾಡಲಾ ಯಿತು.
ಸರ್ಕಾರಿ ಕನ್ನಡ ಮಾದರಿಯ ಪ್ರಾಥಮಿಕ ಶಾಲೆ, ಮದಭಾವಿ LT-2ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಎಸ್. ಬಿ. ಹತ್ತಳ್ಳಿ ಅವರು ನಿರೂಪಿಸುವ ಮೂಲಕ ಅಚ್ಚುಕಟ್ಟಾಗಿ ನಡೆಸಿಕೊಟ್ಟರು.ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಅರ್ಚನಾ ಸಂತೋಷ ಚವ್ಹಾಣ ಅವರು ಪ್ರಾರ್ಥನೆ ಸಲ್ಲಿಸಿದರು.ನಂತರ ರಂಗನಾಥ ದೇಸಾಯಿ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳು,ಸರಳತೆ, ದೇಶಪ್ರೇಮ ಮತ್ತು ರಾಷ್ಟ್ರ ಸೇವೆಯ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಬಿ. ಎಸ್. ಕುಮಾರ್ ಗೌಡ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ, ದೇಶಕ್ಕಾಗಿ ಅವರು ಸಲ್ಲಿಸಿದ ಸೇವೆ ಮತ್ತು ಅವರ ಆದರ್ಶಗಳ ಕುರಿತು ಅರ್ಥಪೂರ್ಣವಾಗಿ ಭಾಷಣ ಮಾಡಿದರು.ಇನ್ನೋರ್ವ ಮುಖ್ಯ ಅತಿಥಿಗಳಾದ ಬಿ. ಎಸ್. ಕಪಾಳಿ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಚರಿತ್ರೆ, ದೇಶಭಕ್ತಿ, ಪ್ರಾಮಾಣಿಕತೆ ಹಾಗೂ ಸರಳ ಜೀವನದ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದಯಾನಂದ ಮನಮಿ, ಹಿರಿಯ ಮುಖ್ಯೋಪಾಧ್ಯಾರು ಅವರು ಅಧ್ಯಕ್ಷೀಯ ಭಾಷಣದಲ್ಲಿ ವಿಶೇಷವಾಗಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಮತ್ತು ದೇಶ ಸೇವೆಯ ಕುರಿತು ವಿವರಿಸಿದರು. ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಎಸ್. ಬಿ. ಹಂಗರಗಿ, ಗುರುಮಾತೆ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಅತಿಥಿಗಳು, ಅಧ್ಯಕ್ಷರು, ಶಿಕ್ಷಕರು ಹಾಗೂ ವಿದ್ಯಾರ್ಥಿ ಗಳಿಗೆ ಕೃತಜ್ಞತೆ ಸಲ್ಲಿಸಿದರು.ಈ ಮೂಲಕ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವು ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ನೆರವೇರಿತು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸತ್ಯ, ಅಹಿಂಸೆ, ಸರಳತೆ, ಪ್ರಾಮಾಣಿಕತೆ ಮತ್ತು ರಾಷ್ಟ್ರ ಸೇವೆ ಯಂತಹ ಮೌಲ್ಯಗಳನ್ನು ಬೆಳೆಸುವಲ್ಲಿ ಸಹಕಾರಿ ಯಾಯಿತು.
ಸುದ್ದಿ ಸಂತೆ ನ್ಯೂಸ್ ವಿಜಯಪುರ.....