LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಾರ್ವತ್ರಿಕ ರಜೆ ನೀಡಲು ಮನವಿ - ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಸಲ್ಲಿಕೆ.....

ಉಡುಪಿ -

ಕರಾವಳಿಯ ಕ್ರೈಸ್ತರು ಸೆ.8ರಂದು ಆಚರಿಸುವ ಮೇರಿ ಮಾತೆಯ ಜನ್ಮದಿನವಾದ ಮೊಂತಿ ಫೆಸ್ಟ್​ (ತೆನೆ ಹಬ್ಬ)ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲೆ ಗಳಿಗೆ ಸಾರ್ವತ್ರಿಕ ರಜೆ ಘೋಷಸುವಂತೆ ಕಥೊಲಿಕ್​ ಸಭಾ ಮಂಗಳೂರು ಮತ್ತು ಉಡುಪಿ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದೆ.ವಿಧಾನ ಪರಿಷತ್​ ಸದಸ್ಯ ಐವನ್​ ಡಿಸೋಜ ನೇತೃತ್ವದ ನಿಯೋಗವು ಆರೋಗ್ಯ ಸಚಿವ, ಮಂಗಳೂರು ಜಿಲ್ಲಾ ಉಸ್ತುವಾರಿ ಯು.ಟಿ. ಖಾದರ್​ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರನ್ನು ಭೇಟಿ ಯಾಗಿ ಮನವಿ ಸಲ್ಲಿಸಿತು.

ಕರಾವಳಿಯೂ ಸೇರಿದಂತೆ ರಾಜ್ಯದೆಲ್ಲಡೆ ಕ್ರೈಸ್ತರು ಪ್ರತಿವರ್ಷ ಸೆ.8ರಂದು ನೂರಾರು ವರ್ಷದಿಂದ ಕುಟುಂಬ ಹಬ್ಬದ ವಿಶೇಷ ದಿನವನ್ನಾಗಿ ಆಚರಿಸುತ್ತ ಬಂದಿದ್ದಾರೆ. ಈ ದಿನವು ದೇವಮಾತೆ ಕನ್ಯಾಮರಿಯ ಮ್ಮಳ ಜನ್ಮದಿನವಾಗಿದೆ ಇದೇ ದಿನದಂದು ತೆನೆ ಹಬ್ಬ ಆಚರಿಸುತ್ತೇವೆ.

ರೈತರು ಬೆಳೆದ ಹೊಸ ಫಸಲನ್ನು ದೇವರಿಗೆ ಅರ್ಪಿಸಿ, ದೇವಾಲಯಗಳಲ್ಲಿ ಪೂಜಾವಿಧಿ ನೆರವೇರಿಸಿ ಕುಟುಂಬದವರೊಂದಿಗೆ ಭೋಜನ ಮಾಡಿ ಸಂಭ್ರಮಿಸಲಾಗುತ್ತದೆ. ಹೀಗಾಗಿ ವಿಶೇಷ ದಿನದ ನಿಮಿತ್ತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜಾ ನೀಡುವಂತೆ ಮನವಿ ಸಲ್ಲಿಸಿದರು

ನಿಯೋಗದಲ್ಲಿ ಕಥೊಲಿಕ್​ ಸಭಾ ಮಂಗಳೂರು ಪ್ರದೇಶದ ಅಧ್ಯಕ್ಷ ಸಂತೋಷ್​ ಡಿಸೋಜ, ಉಪಾಧ್ಯಕ್ಷ ಸ್ಟೀವನ್​ ರೊಡ್ರಿಗಸ್​, ರಾಜಕೀಯ ಸಂಚಾಲಕ ಸ್ಟ್ಯಾನಿ ಲೋಬೊ, ಉಡುಪಿ ಅಧ್ಯಕ್ಷ ಮೆಲ್ವಿನ್​ ಆರಾನ್ಹಾ ಶಿರ್ವ, ಕಾರ್ಯದರ್ಶಿ ಜೂಲಿಯೆಟ್​ ಡಿಸೋಜ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಉಡುಪಿ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....