LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಬರೊಬ್ವರಿ 10 ಸಾವಿರ ಶಿಕ್ಷಕರು ಗೈರು ಸಿದ್ದವಾಯಿತು ಗೈರಾದ ಶಿಕ್ಚಕರ ಪಟ್ಟಿ ಸೂಕ್ತ ಕ್ರಮಗಳನ್ನು ಸೂಚನೆ.....

ಬೆಂಗಳೂರು -

ಪ್ರಸಕ್ತ ಸಾಲಿನ SSLC ಉತ್ತರ ಪತ್ರಿಕೆಗಳ ಮೌಲ್ಯಮಾಪ ನಕ್ಕೆ ಸುಮಾರು 10 ಸಾವಿರ ಶಿಕ್ಷಕರು ಗೈರಾಗಿದ್ದು ಈ ಪೈಕಿ ಖಾಸಗಿ ಶಾಲಾ ಶಿಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಇವರ ವಿರುದ್ಧ ಸೂಕ್ತ ಕ್ರಮ ಜರಗಿಸುವಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ.ಎ.23 ರಿಂದ ಮೇ 5ರ ವರೆಗೆ ಮೌಲ್ಯಮಾಪನ ನಡೆದಿದೆ.ಈ ಅವಧಿಯಲ್ಲಿ ಗೈರು ಹಾಜರಾಗಿರುವ ಗರ್ಭಿಣಿ,ಬಾಣಂತಿ ಹಾಗೂ ಗಂಭೀರ ಆರೋಗ್ಯ ಸಮಸ್ಯೆ ಇರುವವರನ್ನು ಹೊರತುಪಡಿಸಿ ಉಳಿ ದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಬಾರಿ 73,236 ಶಿಕ್ಷಕರು ನೋಂದಣಿ ಮಾಡಿಕೊಂಡಿ ದ್ದರು ಗೈರು ಹಾಜರಾದವರಲ್ಲಿ ಶೇ.50 ರಷ್ಟು ಶಿಕ್ಷಕರು ಖಾಸಗಿ ಶಾಲೆಯವರಾಗಿದ್ದು ಇವರ ಮೇಲೆ ಕ್ರಮ ಕೈಗೊ ಳ್ಳಲು ಸರಕಾರದ ವತಿಯಿಂದ ಸಾಧ್ಯವಿಲ್ಲ.ಉಳಿದ ಸರಕಾರಿ ಶಾಲೆಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವಂತೆ ಡಿಡಿಪಿಐಗಳಿಗೆ ಸೂಚನೆ ನೀಡಲಾಗಿದೆ.ಗೈರು ಹಾಜರಾದ ವರಿಗೆ ದಂಡ ವಿಧಿಸುವುದು ಅಥವಾ ಮುಂದಿನ ವರ್ಷದ ಮೌಲ್ಯಮಾಪನ ಕಾರ್ಯಕ್ಕೆ ಕಪ್ಪು ಪಟ್ಟಿಗೆ ಸೇರಿಸಲಾಗು ವುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್‌.ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....