LIVE TV LocalCrimeNationalInternationalPoliticsEducationTechnologyEntertainmentSportsFeature
State News

1K ಆಸೆಗೆ ಬಿದ್ದು ಜೈಲು ಸೇರಿದ ಸರ್ಕಾರಿ ನೌಕರ.....ಲೋಕಾಯುಕ್ತ ಟ್ರ್ಯಾಪ್.....

ತುಮಕೂರು -

ಪಟಾಕಿ ಮಾರಾಟ ಹಾಗೂ ದಾಸ್ತಾನು ಪರವಾನಗಿ (ಲೈಸೆನ್ಸ್) ನೀಡಲು ಲಂಚ ಸ್ವೀಕರಿಸುತ್ತಿದ್ದತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ಗ್ರೇಡ್-1 ಕಚೇರಿ ಸಹಾಯಕ (ತಹಸೀಲ್ದಾರ್) ಮುರಳೀಧರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಾಲೂಕಿನ ಹೆಗ್ಗೆರೆ ನಿವಾಸಿ ಉಮಾಶಂಕರ್ ಎಸ್.ಸಿ ಎಂಬವರು ನಗರದಲ್ಲಿ ಪಟಾಕಿ ಮಾರಾಟ ಮಳಿಗೆ ತೆರೆಯಲು ಹಾಗೂ ದಾಸ್ತಾನು ಲೈಸೆನ್ಸ್ ಕೋರಿ ಸೆ. 25 ರಂದು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅ. 6 ರಂದು ಕಚೇರಿಗೆ ತೆರಳಿ ವಿಚಾರಿಸಿದಾಗ, ವಿವಿಧ ಇಲಾಖೆಗಳಿಗೆ ಪತ್ರ ವ್ಯವಹಾರ ನಡೆಸಲು ಆರೋಪಿ ಮುರಳೀಧರ್ ಒಟ್ಟು 2,000 ರುಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ 1,000 ರುಪಾಯಿಯನ್ನು ಮುಂಗಡವಾಗಿ ಪಡೆದು ಉಳಿದ 1,000 ರುಪಾಯಿ ನೀಡುವಂತೆ ಒತ್ತಾಯಿಸಿದ್ದರು.

ಲಂಚ ನೀಡಲು ಇಷ್ಟವಿಲ್ಲದ ದೂರುದಾರರು ಅ. 7 ರಂದು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದೇ ದಿನ ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳಿಕೆ 1,000 ರುಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಆರೋಪಿ ಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

​ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ. ಮಲ್ಲೇಶ್ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕಿ ನಿರ್ಮಲ.ವಿ ನೇತೃತ್ವದ ತಂಡವು ಈ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿಗಳಾದ ಡಾ. ಸಂತೋಷ್.ಕೆ.ಎಂ, ಮಂಜುನಾಥ.ಎಂ, ಇನ್ಸ್‌ಪೆಕ್ಟರ್‌ಗಳಾದ ರಾಘವೇಂದ್ರ. ಜಿ.ಕೆ, ರಾಜು.ಟಿ ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು

ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಲೋಕಾಯುಕ್ತ ನಿಮ್ಮ ಮನೆಗೆ ಬಿದ್ದಿರುವುದು ಜಿಲ್ಲಾಡಳಿತದ ಕಾರ್ಯವೈಖರಿ ಯನ್ನು ಎತ್ತಿ ತೋರಿಸುತ್ತಿದೆ.

ಸುದ್ದಿ ಸಂತೆ ನ್ಯೂಸ್

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....