LIVE TV LocalCrimeNationalInternationalPoliticsEducationTechnologyEntertainmentSportsFeature
State News

2023 - 24 ನೇ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದ ಇಲಾಖೆ - ಅಕ್ಟೋಬರ್ ರಜೆ ಸೇರಿದಂತೆ ಕಂಪ್ಲೀಟ್ ಮಾಹಿತಿ.....

ಬೆಂಗಳೂರು -

2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಯನ್ನು ಇಲಾಖ  ಬಿಡುಗಡೆ ಮಾಡಿದೆ ಹೌದು ಮೇ.29ರಿಂದ ಶಾಲೆಗಳು ಆರಂಭವಾಗಲಿದ್ದು ಅ 8ರಿಂದ ದಸರಾ ರಜೆ ಇರಲಿದೆ.2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ.

ಈ ಬಾರಿ ಬೇಸಿಗೆ ರಜೆಯ  ಮುಕ್ತಾಯದ ನಂತ್ರ ಮೇ.29 ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ಅ.8ರಿಂದ ದಸರಾ ಹಾಗೂ ದಿನಾಂಕ 11-04-2024 ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು ರಾಜ್ಯಾಧ್ಯಂತ ಏಕರೂಪದ ಯಶಸ್ವಿ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ವಾರ್ಷಿಕ ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಪರೀಕ್ಷೆ ಹಾಗೂ ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಮಕ್ಕಾಗಿ ಫಲಿತಾಂ ಶಮುಖಿ ಚಟುವಟಿಕೆಗಳ ನಿರ್ವಹಮೆ ಹಾಗೂ ವಿವಿಧ ಶಾಲಾ ಹಂತದ ಸಿಸಿ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ.

ದಿನಾಂಕ 29-05-2023ರಿಂದ ಶಾಲೆ ಪ್ರಾರಂಭಿ ಸಲು ಸೂಚಿಸಲಾಗಿತ್ತು. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿ ಯನ್ನು ನಿಗಧಿಪಡಿಸಲಾಗಿದೆ.ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳ್ನು ಜಾರಿಗೊಳಿಸಲು ಅನುಕೂಲ ವಾಗುವಂತೆ ಶೈಕ್ಷಣಿಕ ಅವಧಿಗಳು, ರಜಾ ದಿನ ಗಳು ಮತ್ತು ವಾರ್ಷಿಕ ಕಾರ್ಯಸೂಚಿಯನ್ನು ನಿಗಧಿಪಡಿಸಲಾಗಿದೆ.ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾ ಲನೆ ಮಾಡಲು ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....