LIVE TV LocalCrimeNationalInternationalPoliticsEducationTechnologyEntertainmentSportsFeature
National News

ನಟಿ ರಾಗಿಣಿ ದ್ವಿವೇದಿಗೆ ಜಾಮೀನು - ಜೈಲಿನಿಂದ ಕೊನೆಗೂ ಸಿಕ್ಕಿತು ಮುಕ್ತಿ

ನವದೆಹಲಿ-

ಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ.

ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು ಇಂದು ವಿಚಾರಣೆ ಮಾಡಿದ ನ್ಯಾಯಾಲಯ ನಟಿಗೆ ಜಾಮೀನು ನೀಡಿದೆ‌.

ಅನೇಕ ಸೆಲೆಬ್ರಿಟಿಗಳಿಗೆ ಮತ್ತು ಪ್ರಮುಖ ವ್ಯಕ್ತಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದವರೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ಸೆಪ್ಟೆಂಬರ್ 4ರಂದು ನಟಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಯಲಹಂಕದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ಬಂಧಿಸಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು ಇವೆಲ್ಲದರ ನಡುವೆ 140 ದಿನಗಳ ಕಾರಾಗೃಹದಿಂದ ಮುಕ್ತಿ ಸಿಕ್ಕಿದ್ದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....