LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಂಗನವಾಡಿ ಕಾರ್ಯಕರ್ತೆಯ ಮಗನಿಗೆ ವೈದ್ಯಕೀಯ ಸೀಟು - ಜಿಪಂ ಸಿಇಓ ರಿಂದ ಸನ್ಮಾನ

ಧಾರವಾಡ -

ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶೈಲಜಾ ನಿಜಗುಣೇಶ ಹೂಗಾರ ದಂಪತಿಗಳ ಪುತ್ರ ಸಿದ್ಧಲಿಂಗೇಶನಿಗೆ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಸೀಟು ದೊರಕಿದೆ‌.

ಈ ಒಂದು ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಜವಾಹರ ನವೋದಯ ವಿದ್ಯಾಲಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿಯನ್ನು ಶೇ.94.25 ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಈ ವಿದ್ಯಾರ್ಥಿ ನೀಟ್ ಪ್ರವೇಶ ಪರೀಕ್ಷೆಯಲ್ಲಿ 967 ನೇ ರಾಂಕ್ ಪಡೆದಿದ್ದರು.

ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ ಅವರು ಈ ವಿದ್ಯಾರ್ಥಿಗೆ ಮೊದಲ ವರ್ಷದ ಎಂಬಿಬಿಎಸ್ ಪಠ್ಯಪುಸ್ತಕ, ಎಪ್ರಾನ್ ,ಸ್ಟೆತೋಸ್ಕೋಪ್ ಕೊಡುಗೆಯಾಗಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಶೆಟ್ಟರ್ ಸೇರಿದಂತೆ ಮಹಿಳಾ ಮೇಲ್ವಿಚಾರಕಿಯರು ಈ ಒಂದು ಸನ್ಮಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....