LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....

ನವಾಡ -

ಶಾಲೆಯೊಂದರಲ್ಲಿ ವಿದ್ಯಾಬುದ್ಧಿ ಕಲಿಸಿಮಾರ್ಗದರ್ಶನ ನೀಡಬೇಕಿದ್ದ ಮುಖ್ಯೋಪಾಧ್ಯಾಯನೇ ವಿದ್ಯಾರ್ಥಿ ನಿಯರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕರಾಳ ಮುಖ ಬಯಲಾಗಿದೆ.ಬಿಹಾರದ ನವಾಡ ಜಿಲ್ಲೆಯ ಅಕಬರ್‌ಪುರ, ಆನಂದಪುರ ವ್ಯಾಪ್ತಿಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಮುಖ್ಯೋಪಾಧ್ಯಾಯ ಮಹೇಶ್ ಪ್ರಸಾದ್ ಯಾದವ್ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

6 ರಿಂದ 8 ನೇ ತರಗತಿಯ ಬಾಲಕಿಯರು ಈಕಾಮುಕ ಶಿಕ್ಷಕನ ವಿಕೃತ ವರ್ತನೆಯನ್ನು ಬಹಿರಂಗಪಡಿಸಿ ದ್ದಾರೆ.ಶಾಲೆಯ ಶೌಚಾಲಯದ ಬಳಿ ಇಣುಕಿ ನೋಡು ವುದು, ಉತ್ತರ ಪತ್ರಿಕೆ ಅಥವಾ ಪರೀಕ್ಷಾ ಸಾಮಗ್ರಿ ಗಳನ್ನು ನೀಡುವ ನೆಪದಲ್ಲಿ ವಿದ್ಯಾರ್ಥಿನಿಯರನ್ನು ತಮ್ಮ ಕೊಠಡಿಗೆ ಕರೆಸಿಕೊಂಡು ಅಸಭ್ಯವಾಗಿ ಮೈಕೈ ಮುಟ್ಟುವುದು ಬಾಲಕಿಯರನ್ನು ಬಲವಂತವಾಗಿ ಮಡಿಲಲ್ಲಿ ಎತ್ತಿ ಕೂರಿಸಿಕೊಳ್ಳುವುದು ಹಾಗೂ ಕೂದಲು ಎಳೆಯುವಂತಹ ಕೃತ್ಯಗಳಲ್ಲಿ ಈತ ತೊಡಗಿದ್ದ ಎಂದು ಬಾಲಕಿಯರು ಕಣ್ಣೀರು ಹಾಕುತ್ತಾ ಆರೋಪಿಸಿದ್ದಾರೆ

ಸಾಮಾನ್ಯವಾಗಿ ಇಂತಹ ಘಟನೆಗಳು ನಡೆದಾಗ ಭಯಪಟ್ಟು ಮೌನವಾಗುವ ಸ್ಥಿತಿ ಇರುತ್ತದೆ. ಆದರೆ, ಈ ಶಾಲೆಯ ಬಾಲಕಿಯರು ಕಾಮುಕ ಶಿಕ್ಷಕನ ಅಸಭ್ಯ ವರ್ತನೆಯನ್ನು ಸಹಿಸದೆ ಒಟ್ಟಾಗಿ ಧೈರ್ಯದಿಂದ ಧ್ವನಿ ಎತ್ತಿದ್ದಾರೆ.ಈ ವಿಷಯ ತಿಳಿದ ಗ್ರಾಮಸ್ಥರು ಹಾಗೂ ಪೋಷಕರು ಶಾಲೆಯ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನವಾಡ ನಗರ ಠಾಣೆ ಪೊಲೀಸರು ಹಾಗೂ 'ಡಯಲ್ ೧೧೨' ತಂಡ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.ಸಂತ್ರಸ್ತ ಬಾಲಕಿಯರ ಹೇಳಿಕೆ ಆಧರಿಸಿ, ಆರೋಪಿ ಮುಖ್ಯೋಪಾಧ್ಯಾಯನ ವಿರುದ್ಧಪೋಕ್ಸೋ (POCSO) ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಈ ಘಟನೆಯು ಶಾಲಾ ಪರಿಸರದಲ್ಲಿ ಹೆಣ್ಣುಮಕ್ಕಳ ರಕ್ಷಣೆ ಮತ್ತು ಭದ್ರತೆಯ ಬಗ್ಗೆ ಸಮಾಜ ಮತ್ತು ಶಿಕ್ಷಣ ಇಲಾಖೆ ಅತ್ಯಂತ ಎಚ್ಚರ ವಹಿಸಬೇಕಾದ ಅನಿ ವಾರ್ಯತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಸುದ್ದಿ ಸಂತೆ ನ್ಯೂಸ್ ನವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....