LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇಬ್ಬರು ಅಧಿಕಾರಿಗಳ ಬಂಧನ - ಇಬ್ಬರು ಅಧಿಕಾರಿಗಳನ್ನು ವಶಕ್ಕೆ ತಗೆದುಕೊಂಡ ಎಸ್ಐಟಿ ಅಧಿಕಾರಿಗಳು.....

ಬೆಂಗಳೂರು -

ಇಬ್ಬರು ಅಧಿಕಾರಿಗಳ ಬಂಧನ - ಇಬ್ಬರು ಅಧಿಕಾರಿಗಳನ್ನು ವಶಕ್ಕೆ ತಗೆದುಕೊಂಡ ಎಸ್ಐಟಿ ಅಧಿಕಾರಿಗಳು ಹೌದು

ಹೌದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವಾಗಿ ಬೇರೆಡೆ ವರ್ಗಾವಣೆಯಾದ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳನ್ನು ಬಂಧನ ಮಾಡಲಾಗಿದೆ ಈ ಒಂದು ಪ್ರಕರಣದ ತನಿಖೆಯನ್ನು ಚುರುಕು ಗೊಳಿಸಿರುವ ವಿಶೇಷ ತನಿಖಾ ತಂಡವು ಇಬ್ಬರು ಅಧಿಕಾರಿಗಳನ್ನು ಬಂಧಿಸಿದೆ.

ಪದ್ಮನಾಭ ಮತ್ತು ಮಾಜಿ ಲೆಕ್ಕಾಧಿಕಾರಿ ಪರಶು ರಾಮ್‌ ಜಿ.ದುರ್ಗಣ್ಣನವರ್‌ ಬಂಧಿತರಾದವರಾ ಗಿದ್ದಾರೆ.ನಿಗಮದ ವ್ಯವಸ್ಥಾಪಕ ಎ.ರಾಜಶೇಖರ್‌ ಮೇ 28ರಂದು ನಗರದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು.ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಅಕ್ರಮದಲ್ಲಿ ಭಾಗಿಯಾಗಿರು ವುದು ಪತ್ತೆಯಾಗಿತ್ತು.ಹೀಗಾಗಿ ಸಿಐಡಿ ಕಚೇರಿ ಯಲ್ಲಿ ಇಬ್ಬರನ್ನು ವಿಚಾರಣೆ ನಡೆಸಿ ಬಂಧಿಸ ಲಾಗಿದೆ.

ಬಳಿಕ ಕೋರ್ಟ್‌ಗೆ ಹಾಜರುಪಡಿಸಿ ಆರು ದಿನಗಳ ಕಾಲ ಎಸ್‌ಐಟಿ ವಶಕ್ಕೆ ಪಡೆದುಕೊಳ್ಳಲಾಗಿದೆ. ನಿಗಮದ ಪ್ರಧಾನ ವ್ಯವಸ್ಥಾಪಕ ಎ.ರಾಜಶೇ ಖರ್‌ ಮೇ 28ರಂದು ಹೈಗ್ರೌಂಡ್ಸ್‌ ಠಾಣೆಯಲ್ಲಿ ನೀಡಿದ ದೂರಿನ್ವಯ ಪೊಲೀಸರು ಯೂನಿ ಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಣಿಮೇಖಲೈ, ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾದ ನಿತೇಶ್‌ ರಂಜನ್‌,

ರಾಮಸುಬ್ರಮಣಿಯಂ, ಸಂಜಯ್‌ ರುದ್ರ, ಪಂಕಜ್‌ ದ್ವಿವೇದಿ ಹಾಗೂ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರೌಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.ಮೇ 26ರಂದು ನಿಗಮದ ಅಧೀಕ್ಷಕ ಚಂದ್ರಶೇಖರ್‌ ಶಿವಮೊ ಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು.

ಇದೀಗ ಚಂದ್ರಶೇಖರ್‌ ಪರಿಶಿಷ್ಟ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಪ್ರಕರಣದಲ್ಲಿ ಹೆಚ್ಚುವರಿ ಯಾಗಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಉಲ್ಲೇ ಖಿಸಲು ಎಸ್‌ಐಟಿ ಅಧಿಕಾರಿಗಳು ಸ್ಥಳೀಯ ಕೋರ್ಟ್‌ನ ಅನುಮತಿಯನ್ನು ಪಡೆದು ಕೊಂಡಿ ದ್ದಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....