LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ.....ಮಹತ್ವದ ಮಾಹಿತಿ.....

ಬೆಂಗಳೂರು -

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯು (ಕೆಜಿಐಡಿ) ತನ್ನ ಕೆಜಿಐಡಿ-ಎಂಐಎಸ್ (KGID-MIS) ತಂತ್ರಾಂಶ ದಲ್ಲಿ ಸಮಸ್ಯೆ ದಾಖಲಿಸುವ ವ್ಯವಸ್ಥೆಗೆ ಸಂಬಂಧಿಸಿ ದಂತೆ ಮಹತ್ವದ ಬದಲಾವಣೆಗಳನ್ನು ತಂದು ನೂತನ ಸುತ್ತೋಲೆ ಹೊರಡಿಸಿದೆ. ಇಲಾಖೆಯ ಆನ್‌ಲೈನ್ ಸೇವೆಗಳನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶ ದಿಂದ ಈ ಹೊಸ ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತು ಇಲಾಖೆಯ ನಿರ್ದೇಶಕರು ಹೊರಡಿಸಿ ರುವ ಅಧಿಕೃತ ಸುತ್ತೋಲೆಯ ಪ್ರಕಾರ, ಇನ್ನು ಮುಂದೆ ಸರ್ಕಾರಿ ನೌಕರರು, ಡಿಡಿಒಗಳು ಹಾಗೂ ವಿಮಾ ದಾರರು ದಾಖಲಿಸುವ ಯಾವುದೇ ದೂರು ಅಥವಾ ಟಿಕೆಟ್‌ಗಳು ನೇರವಾಗಿ ಪ್ರತ್ಯೇಕ ಶಾಖೆ ಅಥವಾ ಜಿಲ್ಲೆಗಳಿಗೆ ಸಲ್ಲಿಕೆಯಾಗುವುದಿಲ್ಲ ಬದಲಾಗಿ, ಸೃಜಿಸ ಲಾಗುವ ಎಲ್ಲ ಟಿಕೆಟ್‌ಗಳು ಮೊದಲು ಕೇಂದ್ರ ಕಚೇರಿಯ ಸಹಾಯವಾಣಿ ಕೇಂದ್ರದಲ್ಲೇ ಸ್ವೀಕೃತ ವಾಗಲಿವೆ.news_1790267979_0_224.webp

 

ಹೀಗೆ ಸ್ವೀಕೃತವಾಗುವ ಟಿಕೆಟ್‌ಗಳನ್ನು ಸಹಾಯ ವಾಣಿ ಕೇಂದ್ರದಲ್ಲಿ ಕೂಲಂಕಷವಾಗಿ ಪರಿಶೀಲಿಸಿ, ಅವುಗಳ ವರ್ಗ (Category), ಉಪವರ್ಗ (Sub Category), ಸಮಸ್ಯೆಯ ವಿಧ (Problem Type) ಹಾಗೂ ಉಪವಿಧಗಳ (Sub Problem Type) ಆಧಾರದ ಮೇಲೆ ಸಂಬಂಧಪಟ್ಟ ವಿಭಾಗ ಮತ್ತು ಜಿಲ್ಲಾ ಕಚೇರಿಗಳಿಗೆ ವರ್ಗಾಯಿಸಲಾಗುತ್ತದೆ. ಹೀಗೆ ವರ್ಗಾವಣೆಯಾದ ಸಮಸ್ಯೆಗಳನ್ನು ನಿಗದಿತ ಕಾಲಮಿತಿಯೊಳಗೆ ಕಡ್ಡಾಯವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

ಜಿಲ್ಲಾ ವಿಮಾ ಕಚೇರಿಗಳಲ್ಲಿ ಟಿಕೆಟ್‌ಗಳ ವಿಲೇವಾರಿಗೆ ನಿಯೋಜಿಸಲಾದ ಸಿಬ್ಬಂದಿಯು ಅಧಿಕೃತ ಪೋರ್ಟಲ್ ಗೆ ಲಾಗಿನ್ ಆಗಿ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮಕೈಗೊಳ್ಳುವಂತೆ ಸೂಚಿಸ ಲಾಗಿದ್ದು, ಈ ಹಿಂದಿನ ಸುತ್ತೋಲೆಯಲ್ಲಿ ತಿಳಿಸಲಾ ಗಿರುವ ಕಾರ್ಯವಿಧಾನಗಳನ್ನು ಮುಂದುವರಿಸಲು ನಿರ್ದೇಶಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....