LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಪ್ರತೀ ತಿಂಗಳ ಮೊದಲ ಶನಿವಾರ ಬ್ಯಾಗ್ ರಹಿತ ದಿನ: ಮಾರ್ಗಸೂಚಿ ಪ್ರಕಟ

ಬೆಂಗಳೂರು -

ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡಲಾಗಿತ್ತು. ಇದೀಗ ಈ ಬ್ಯಾಗ್ ರಹಿತ ದಿನದ ಆಚರಣೆ ಸಂಬಂಧ ಶಾಲಾ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.

 

 

ಈ ಕುರಿತಂತೆ ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿ ದ್ದಾರೆ.ಈ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಾಲೆ ಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಸಂಭ್ರಮ ಶನಿವಾರ  ಬ್ಯಾಗ್ ರಹಿತ ದಿನವನ್ನು ಆಚರಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇನ್ನೂ ಬ್ಯಾಗ್ ರಹಿತ ದಿನದಂದು ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವು ದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗಾಗಿ ವಿವಿಧ 10 ವಿಷಯಗಳಲ್ಲಿ ಸ್ವಯಂ ವಿವರಣಾತ್ಮಕ ಚಿತ್ರ ಸಹಿತ ಚಟುವಟಿಕೆ ಪುಸ್ತಕಗಳನ್ನು ಹಾಗೂ ಅವುಗಳನ್ನು ತರಗತಿಗಳಲ್ಲಿ ನಿರ್ವಹಿಸಲು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧ ಪಡಿಸಲಾಗಿದೆ ಎಂದಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಎಲ್ಲಾ ಶಿಕ್ಷಕರು ಕೈಪಿಡಿಯನ್ನು DSERT ವೆಬ್ ಸೈಟ್ https://dsert.kar.nic.in ಜಾಲತಾಣಕ್ಕೆ ಭೇಟಿ ನೀಡಿ, ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....