LIVE TV LocalCrimeNationalInternationalPoliticsEducationTechnologyEntertainmentSportsFeature
State News

BEO ಕಚೇರಿ ಜಪ್ತಿ ಕಚೇರಿಯಲ್ಲಿನ ವಸ್ತುಗಳನ್ನು ತಗೆದುಕೊಂಡು ಹೋದ ಅರ್ಜಿದಾರರು....

ಕಾರವಾರ -

ಶಾಲೆಯ ಬಾಡಿಗೆಯನ್ನು ಪಾವತಿಸದ ಹಿನ್ನಲೆಯಲ್ಲಿ ಬಿಇಓ ಕಚೇರಿಯನ್ನು ಜಪ್ತಿ ಮಾಡಿದ ಘಟನೆ ಕಾರವಾರದಲ್ಲಿ ನಡೆದಿದೆ.ಹೌದು ಭಟ್ಕಳದ ಮುಗ್ದುಮ್ ಕಾಲೋನಿಯ ಜಮಾತುಲ್ ಮುಸ್ಲಿಮಿನ್‌ನ ಕಟ್ಟಡದಲ್ಲಿನ ಸರ್ಕಾರಿ ಉರ್ದು ಪ್ರಾರ್ಥಮಿಕ ಶಾಲೆಯ ಕಟ್ಟಡವನ್ನು ಕಳೆದ 40 ವರ್ಷಗಳಿಂದ ನಡೆಯುತ್ತಿದ್ದು 20 ವರ್ಷಗಳಿಂದ ಬಾಡಿಗೆ ಬಾಕಿ ಉಳಿಸಿಕೊಂಡಿರುವುದರಿಂದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.ಈ ಕುರಿತಂತೆ ವಿಚಾರಣೆ ಮಾಡಿದ ನ್ಯಾಯಾಲಯ ಆದೇಶವನ್ನು ಮಾಡಿದ್ದು ಹೀಗಾಗಿ ಆದೇಶ ದಂತೆ ಭಟ್ಕಳದ ಬಿಇಒ ಕಚೇರಿಯ ಉಪಕರಣಗಳನ್ನು ನ್ಯಾಯಾಲಯದ ಸಿಬ್ಬಂದಿ ಜಪ್ತಿ ಮಾಡಿದರು.

ಮುಗ್ದುಮ್ ಕಾಲೋನಿಯಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯು 40 ವರ್ಷದಿಂದ ಬಾಡಿಗೆ ಕಟ್ಟಡ ದಲ್ಲಿ ನಡೆಯುತ್ತಿದ್ದು ಈ ಕಟ್ಟಡವು ಜಮಾತೆ ಮುಸ್ಲೀಮಿ ನ್‌ಗೆ ಸೇರಿದೆ.ಸುಮಾರು 20 ವರ್ಷದಿಂದ ಶಿಕ್ಷಣಾಧಿಕಾರಿ ಕಚೇರಿಯಿಂದ ಕಟ್ಟಡದ ಬಾಡಿಗೆ (ಸುಮಾರು 1.49 ಲಕ್ಷ) ಕಟ್ಟದ ಕಾರಣ ಜಮಾತೆ ಮುಸ್ಲೀಮಿನ್ ಕಾರ್ಯದರ್ಶಿ 2005 ರಲ್ಲಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.ಅದರಂತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬಿಇಓ ಕಛೇರಿಯಲ್ಲಿನ ಉಪಕರಣಗಳನ್ನು ಜಪ್ತಿ ಮಾಡುವಂತೆ ಸೆಪ್ಟೆಂಬರ್ 14 ರಂದು ಆದೇಶ ಹೊರಡಿಸಿತ್ತು.ಅದರಂತೆ ತಾಲೂಕಿನ ಜೆಎಮ್‌ಎಫ್‌ಸಿ ನ್ಯಾಯಾಲಯದ ಬಿಲಿಫ್ ಗಣಪತಿ ಬಿಇಓ ಕಛೇರಿಗೆ ಬಂದು ನ್ಯಾಯಲಯದ ವಾರಂಟ್ ಹೊರಡಿಸಿ ಜಪ್ತಿ ನಿಯಮ ಜಾರಿಗೆ ಮಾಡಿ ವಸ್ತುಗಳನ್ನು ಜಪ್ತಿ ಮಾಡಿಕೊಂಡರು

9 ಕಂಪ್ಯೂಟರ್, 66 ಫೈಬರ್ ಚೇರ್, 26 ಕುರ್ಚಿ, 26 ಟೇಬಲ್, ಒಂದು ವಾಹನ ಹಾಗೂ 2 ಮೆಟಲ್ ಟೇಬಲ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕಾಲಾವಕಾಶ ಕೇಳಿದ ಶಿಕ್ಷಣಾಧಿಕಾರಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಮುಗ್ದುಮ್ ಕಾಲೋನಿಯ ಜಮಾತುಲ್ ಮುಸ್ಲಿಮಿನ್ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಕೂಡ ಜಪ್ತಿಯ ವೇಳೆ ಬಿಇಒ ಕಚೇರಿಗೆ ಬಂದಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಈ ವೇಳೆ ಅವರ ಬಳಿ ಒಂದು ತಿಂಗಳ ಕಾಲಾವಕಾಶ ಕೇಳಿದರು.ನ್ಯಾಯಾ ಲಯದ ಆದೇಶಕ್ಕೆ ವಿರುದ್ಧವಾಗಿ ನಾವು ನಡೆದುಕೊಳ್ಳಲು ಸಾಧ್ಯವಿಲ್ಲ.ಜಪ್ತಿಯ ಆದೇಶದಂತೆ ನಮಗೆ ಸಿಗಬೇಕಾದ ಹಣ ನೀಡಬೇಕು. ಇದಕ್ಕೆ ನ್ಯಾಯಾಲಯದ ಆದೇಶದಂತೆ ಮುಂದುವರೆಯಲಿ ಎಂದು ಜಮಾತುಲ್ ಮುಸ್ಲಿಮಿನ್ ಅಧ್ಯಕ್ಷ ಸಾದಿಕ್ ಮಟ್ಟಾ ತಿಳಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....