LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕ ಅಮಾಮತು - ದೂರಿನ ಹಿನ್ನಲೆ ಶಿಕ್ಷಕ ನನ್ನು ಅಮಾನತು ಮಾಡಿದ BEO.....

ಮೈಸೂರು -

ಮೈಸೂರಿನಲ್ಲಿ ದೈಹಿಕ ಶಿಕ್ಷಕರೊಬ್ಬರು ಜಾತಿ ವಿಚಾರ ವಾಗಿ ಕಳುಹಿಸಿದ್ದ ಸಂದೇಶಕ್ಕೆ ತೀವ್ರ ವಿರೋಧ ವ್ಯಕ್ತ ವಾಗಿದೆ. ಎಚ್.ಡಿ. ಕೋಟೆ ಪಟ್ಟಣದ ಯರಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರವಿ, ತಮ್ಮ ಎಡಗೈ ಸಮುದಾಯದ ಮಕ್ಕಳಿಲ್ಲದ ಶಾಲೆಗೆ ಶಿಕ್ಷಕ ನಾಗಿರಲು ಸಾಧ್ಯವಿಲ್ಲ, ರಾಜಿನಾಮೆ ಕೊಡುತ್ತೇನೆಂದು ವಾಟ್ಸಪ್‌ ಗ್ರೂಪ್​​ನಲ್ಲಿ ಸಂದೇಶ ಕಳುಹಿಸಿದ್ದರು.ಈ ಹಿನ್ನೆಲೆ ಬಲಗೈ ಸಮಾಜದ ಮುಖಂಡರು ದೂರು ನೀಡಿದ್ದು, ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಎಡಗೈ ಜಿಲ್ಲಾ ನೌಕರರ ಸಂಘದ ವಾಟ್ಸಪ್‌ ಗ್ರೂಪ್​ನಲ್ಲಿ ಸಂದೇಶ ಕಳುಹಿಸಿದ್ದ ಶಿಕ್ಷಕ ರವಿ, 'ಕಳೆದ 18 ವರ್ಷಗಳಿಂದ ಸರ್ಕಾರಿ ಶಾಲೆ ಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ತಂದು ಕೊಟ್ಟಿದ್ದೇನೆ. ಆದರೆ, ತಮ್ಮ ಶಾಲೆಯಲ್ಲಿ ಎಡಗೈ ಸಮುದಾಯದ ಒಬ್ಬರೂ ವಿದ್ಯಾರ್ಥಿಗಳಿಲ್ಲದಿರುವುದು ಮನಸ್ಸಿಗೆ ನೋವು ತಂದಿದ್ದು

 

ಇದರಿಂದ ಬೇಸತ್ತು ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ' ಎಂದು ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ಸಚಿವ ಎಚ್.ಸಿ.ಮಹದೇವಪ್ಪ ಅವರ ಕುರಿತಾಗಿಯೂ ಸಂದೇಶದಲ್ಲಿ ಟೀಕೆ ಮಾಡಿದ್ದಾರೆ.ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿ ದ್ದಂತೆಯೇ ಬಲಗೈ ಸಮಾಜದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಶಿಕ್ಷಕನ ವಿರುದ್ಧ ಬ್ಲಾಕ್‌ ಶಿಕ್ಷಣಾ ಧಿಕಾರಿಗೆ (ಬಿಇಒ) ದೂರು ಸಲ್ಲಿಸಿದ್ದಾರೆ.

ರವಿ ಅವರ ಸಂದೇಶವು ಸಮುದಾಯಗಳ ಮಧ್ಯೆ ವೈಮನಸ್ಸು ಉಂಟುಮಾಡುವ ಪ್ರಚೋದನಕಾರಿ ಹೇಳಿಕೆ ಎಂದು ಆರೋಪಿಸಿದ್ದಾರೆ. ದೂರು ಮತ್ತು ವರದಿ ಆಧರಿಸಿ ಬಿಇಒ ಅವರು ಶಿಕ್ಷಕನ ವಿರುದ್ಧ ವಿಚಾರಣೆ ಕಾಯ್ದಿರಿಸಿ ಅಮಾನತು ಆದೇಶ ಹೊರಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮೈಸೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....