LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಡಿಸಿಸಿ ಬ್ಯಾಂಕ್ ನಿರ್ದೇಶಕ, ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆಗೆ ಶರಣು......

ಬೆಳಗಾವಿ -

ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿಜೆಪಿ ಯ ಯುವ ಮುಖಂಡ ನೀಲಕಂಠ ಕಪ್ಪಲಗುದ್ದಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

29 ವರ್ಷದ ಶ್ರುತಿ ಕಪ್ಪಲಗುದ್ದಿ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಬೆಳಗಾವಿ ತಾಲೂಕಿನ ಮಾರಿಹಾಳ ಗ್ರಾಮದ ನಿವಾಸಿಯಾದ ಶ್ರುತಿ ಕಳೆದ ಎರಡು ವರ್ಷಗಳ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ ‌ತಾಲೂಕಿನ ಕಲ್ಲೋಳಿ ಗ್ರಾಮದ ನೀಲಕಂಠ ಕಪ್ಪಲಗುದ್ದಿ ಜೊತೆ ವಿವಾಹವಾಗಿತ್ತು. ಗಂಡ ಪ್ರತಿ ದಿನ ಮನೆಗೆ ಕುಡಿದು ಬರುತ್ತಿದ್ದಕ್ಕೆ ಗಲಾಟೆಯಾಗುತ್ತಿತ್ತಂತೆ. ಇದಕ್ಕೆ ಬೇಸತ್ತು ಶ್ರುತಿ ಮನೆಯ ಬೆಡ್ ರೂಂನಲ್ಲಿ ಫ್ಯಾನ್‌ಗೆ ಸೀರೆ ಕಟ್ಟಿಕೊಂಡು ನೇಣಿಗೆ ಶರಣಾಗಿದ್ದಾರಂತೆ

ಆತ್ಮಹತ್ಯೆ ಮಾಡಿಕೊಂಡ ಶ್ರುತಿಗೆ 15 ತಿಂಗಳ ಮುದ್ದಾದ ಮಗಳಿದ್ದು ಆತ್ಮಹತ್ಯೆಗೂ ಮುನ್ನ ‘ಪ್ಲೀಸ್ ಟೇಕ್ ಕೇರ್ ಆಫ್ ಮೈ ಡಾಟರ್’ ಎಂದು ತಂದೆಗೆ ಶ್ರುತಿ ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಬಳಿಕ ಮೆಸೇಜ್ ಗಮನಿಸಿ ವಾಪಸ್ ಕರೆ ಮಾಡಿದಾಗ ಫೋನ್ ರಿಸೀವ್ ಮಾಡದಿದ್ದಾಗ ಮನೆಯವರಿಗೆ ಕರೆ ಮಾಡಿದ್ದಾರೆ.

ಆಗ ಇನ್ನೂ ಮಲಗಿರಬೇಕು ಆಮೇಲೆ ಕರೆ ಮಾಡ್ತಾರೆ ಎಂದು ಹೇಳಿದ್ದಾರಂತೆ. ಬಳಿಕ 10 ಗಂಟೆಗೆ ಅಳಿಯ ನೀಲಕಂಠ ಶ್ರುತಿ ತಂದೆಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡು ವಿಷಯ ತಿಳಿಸಿದ್ದಾನೆ.

ಅಳಿಯ ನಿತ್ಯ ಕುಡಿದು ತಡರಾತ್ರಿ ಆಗಮಿಸುತ್ತಿ ದ್ದಿದ್ದರಿಂದ ಮಗಳು ಶ್ರುತಿ ಮಾನಸಿಕ ಖಿನ್ನತೆಗೊಳಗಾಗಿದ್ದಳು ಎಂದು ಶ್ರುತಿ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....