LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸುಟ್ಟು ಕರಕಲಾದ ಬಣವೆಗಳು - ಕಂಗಾಲಾದ ರೈತ

ಧಾರವಾಡ -

ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಹೊಟ್ಟು ಬೆಂಕಿಗೆ ಆಹುತಿಯಾದ ಘಟನೆ ಧಾರವಾಡ ತಾಲೂಕಿನ ಪುಡಕಲಕಟ್ಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಗಂಗಪ್ಪ ಮಡಿವಾಳರ ಎಂಬುವವರಿಗೆ ಸೇರಿದ ಹೊಟ್ಟಿನ ಬಣವೆಯೇ ಬೆಂಕಿಗೆ ಆಹುತಿಯಾಗಿದೆ. ಇದರ ಜೊತೆಗೆ ಅಲ್ಲೇ ಇದ್ದ ಕಟ್ಟಿಗೆ ಚಕ್ಕಡಿ, ಕ್ರಿಮಿನಾಶಕ ಸಿಂಪಡಿಸುವ ಪಂಪ್ ಕೂಡ ಬೆಂಕಿಗೆ ಆಹುತಿಯಾಗಿವೆ.

ಕಳೆದ ವರ್ಷ ಕೂಡ ಗಂಗಪ್ಪ ಅವರ ಬಣವೆಗಳು ಬೆಂಕಿಗೆ ಆಹುತಿಯಾಗಿದ್ದವು. ಆದರೆ, ಯಾವುದೇ ಪರಿಹಾರ ಬಂದಿರಲಿಲ್ಲ. ನಿನ್ನೆಯೂ ಕೂಡ ತಡರಾತ್ರಿ ಬಣವೆಗಳಿಗೆ ಬೆಂಕಿ ಬಿದ್ದಿದ್ದು 15 ಟ್ರ್ಯಾಕ್ಟರ್ ನಷ್ಟು ಹೊಟ್ಟು ಸುಟ್ಟು ಹೋಗಿದ್ದು, ದನಗಳಿಗೆ ಮೇವು ಇಲ್ಲದಂತಾಯಿತು ಎಂದು ರೈತ ಗಂಗಪ್ಪ ಕಂಗಾಲಾಗಿದ್ದಾನೆ.

ತಡರಾತ್ರಿ ಬೆಂಕಿ ಬಿದ್ದಿದ್ದರಿಂದ ಯಾರಿಗೂ ಗೊತ್ತಾಗಿಲ್ಲ ಬೆಳಗಾಗುವಷ್ಟರಲ್ಲೇ ಬಣವೆಗಳು ಸುಟ್ಟು ಕರಕಲಾಗಿದ್ದವು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....