LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕುಸಿದು ಬಿದ್ದ ಪೊಲೀಸ್ ಪೇದೆ - ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಸಾವು.....

ಹಾವೇರಿ -

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯೊಬ್ಬರು ಅನಾ ರೋಗ್ಯಕ್ಕೀಡಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಯಲ್ಲಿ ನಡೆದಿದೆ‌.ಜಿಲ್ಲೆಯ ಸವಣೂರ ಪಟ್ಟಣ ದಲ್ಲಿ ಕರ್ತವ್ಯದ ಮೇಲಿದ್ದ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಗುಡ್ಡಪ್ಪ ನೀಲಪ್ಪ ಬಜ್ಜಳ್ಳಿ (45)ಮೃತಪಟ್ಟವರಾಗಿ ದ್ದಾರೆ‌.ಕರ್ತವ್ಯ ದಲ್ಲಿದ್ದ ಇವರು ತಲೆಸುತ್ತು ಬಂದು ಕುಸಿದು ಬಿದ್ದಿದ್ದಾರೆ. ತಕ್ಷಣ ಸಾರ್ವಜನಿಕರು ಅವರ ನ್ನು ಸವಣೂರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ದ್ದಾರೆ.

ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಶಿಪ್ಟ್ ಮಾಡುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.ಅವರ ಪಾರ್ಥಿವ ಶರೀರ ವನ್ನು ಅವರ ಸ್ವಂತ ಗ್ರಾಮವಾದ ಹಾವೇರಿ ತಾಲೂ ಕು ಕಳ್ಳಿಹಾಳ ಗ್ರಾಮದಲ್ಲಿ ಅಂತಿಮದರ್ಶನಕ್ಕೆ ಇರಿಸಿ ಸಕಲ ಪೋಲಿಸ್ ಗೌರವಗಳೊಂದಿಗೆ ಅಂತ್ಯ ಸಂಸ್ಕಾ ರ ನೆರವೇರಿಸಲಾಯಿತು.ಮೃತರಿಗೆ ಪತ್ನಿ, ಇಬ್ಬರು ಪುತ್ರರು,ಒಬ್ಬಳು ಪುತ್ರಿ ಹಾಗೂ ಅಪಾರ ಬಂಧುಗ ಳು ಇದ್ದಾರೆ.

ಮೃತರ ಆತ್ಮಕ್ಕೆ ಶಾಂತಿಕೋರಿ ಗೃಹ ಸಚಿವ ಬಸವರಾ ಜ ಬೊಮ್ಮಾಯಿ,ಎಸ್ಪಿ ಕೆ.ಜಿ. ದೇವರಾಜ್, ಸವಣೂ ರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮ ನವರ, ತಹಸೀಲ್ದಾರ್ ಸಿ.ಎಸ್.ಭಂಗಿ, ಪಿಎಸ್‌ಐ ಶಶಿಧರ ಜಿ.ಎಂ. ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....