LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಕ್ಟೋಬರ್ 26 ರಿಂದ ಆರಂಭ ವಾಗಲಿದೆ ಶಿಕ್ಷಕರ ವರ್ಗಾವಣೆ ವರ್ಗಾವಣೆಯ ಕುರಿತು ಕಂಪ್ಲೀಟ್ ಮಾಹಿತಿ.....

ಬೆಂಗಳೂರು -

ಕಳೆದ ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೊನೆಗೂ ಆರಂಭವಾಗುತ್ತಿದೆ ಹೌದು ಅತ್ತ ನ್ಯಾಯಾಲಯದಿಂದ ಪ್ರಕರಣ ಇತ್ಯರ್ಥ ಆಗುತ್ತಿದ್ದಂತೆ ಇತ್ತ ವರ್ಗಾವಣೆ ವೇಳಾಪಟ್ಟಿ ಹೊರಗೆ ಬಿದ್ದಿದೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ದಿನಾಂಕ 26-10-2021 ರಿಂದ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ದಿನಾಂಕ 28-10-2021ರಿಂದ ಹಮ್ಮಿಕೊಳ್ಳಲು ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ.

ಹೌದು ಈ ವರ್ಗಾವಣೆಗೆ ಕೆಎಟಿ ನ್ಯಾಯಾಲಯದಿಂದ ತಡೆಯಾಜ್ಞೆ ತೆರುವಾಗುತ್ತಿದ್ದಂತೆ ವರ್ಗಾವಣೆಗಳನ್ನು ಮುಂದುವರೆಸುವ ಸಂಬಂಧ ಕೆಳಗಿನಂತೆ ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ

ಪರಿಷ್ಕೃತ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಈ ಕೆಳಗಿನಂತೆ ಇದೆ

  • ಖಾಲಿ ಹುದ್ದೆಗಳ ಇಂದೀಕರಣ ಪ್ರಕ್ರಿಯೆ ನಂತರದಲ್ಲಿ ದಿನಾಂಕ 01-10-2021ಕ್ಕೆ ಲಭ್ಯವಿರುವ ಖಾಲಿ ಹುದ್ದೆಗಳ ಮಾಹಿತಿ ವಿವರ ಪ್ರಕಟಿಸುವುದು - ದಿನಾಂಕ 25-10-2021
  • 2019-2020ರಲ್ಲಿ ತಾಲೂಕಿನಿಂದ,ಜಿಲ್ಲೆಯಿಂದ ಹೊರಗೆ ಕಡ್ಡಾಯ,ಹೆಚ್ಚುವರಿ ಪ್ರಕ್ರಿಯೆಯಲ್ಲಿ ವರ್ಗಾವಣೆಗೊಂಡ ಪ್ರಾಥಮಿಕ,ಪ್ರೌಢ ಶಾಲಾ ಶಿಕ್ಷಕರ ಪಟ್ಟಿ ಮಾಹಿತಿಗಾಗಿ ಪ್ರಕಟಿಸಿವುದು - ಈ ಹಿಂದಿನ ಪ್ರಕಟಿತ ವೇಳುಪಟ್ಟಿಯಂತೆ ಪ್ರಕ್ರಿಯೆ ಮುಗಿದಿದೆ
  • ಈಗಾಗಲೇ ಅರ್ಜಿಗಳನ್ನು ಸಲ್ಲಿಸಿ ಕೊಂಡಿರುವ ಶಿಕ್ಷಕರ ಅಂತಿಮ ಪಟ್ಟಿಯನ್ನು ಮಾಹಿತಿಗಾಗಿ ಪ್ರಕಟಿಸುವುದು - ಹಿಂದಿನ ಪ್ರಕಟಿತ ವೇಳಾಪಟ್ಟಿಯಂತೆ ಪ್ರಕ್ರಿಯೆ ಮುಗಿದಿದೆ.
  • ಅಂತಿಮ ಕೌನ್ಸೆಲಿಂಗ್ ಅರ್ಹತಾ,ಜೇಷ್ಟತಾ ಪಟ್ಟಿ ಪ್ರಕಟಣೆ - ಹಿಂದಿನ ಪ್ರಕಟಿತ ವೇಳಾಪಟ್ಟಿಯಂತೆ ಪ್ರಕ್ರಿಯೆ ಮುಗಿದಿದೆ. ದಿನಾಂಕ 22-10-2021ರಂದು ಮರು ಪ್ರಕಟ
  • ಆನ್ ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ( ಪ್ರಾಥಮಿಕ ಶಾಲಾ ಶಿಕ್ಷಕರು ) - ದಿನಾಂಕ 26-10-2021ರಿಂದ ಆರಂಭ
  • ಆನ್ ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ( ಪ್ರೌಢ ಶಾಲಾ ಶಿಕ್ಷಕರು ) - ದಿನಾಂಕ 28-10-2021ರಿಂದ ಆರಂಭ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....