LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾನ್ಸ್‌ಟೇಬಲ್ ಸಾವು - ಬಸ್ ಗೆ ಬಲಿಯಾದ ಪೊಲೀಸ್ ಸಿಬ್ಬಂದಿ

ಬೆಂಗಳೂರು -

ಕಿಲ್ಲರ್ ಬಿಎಂಟಿಸಿ ಗೆ ಪೊಲೀಸ್ ಕಾನ್‌ಸ್ಟೇಬಲ್ ರೊಬ್ಬರು ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾನ್ಸ್‌ಟೇಬಲ್ ಸಾವಿಗೀಡಾ ಗಿದ್ದಾರೆ‌. ಬ್ಯಾಡರಹಳ್ಳಿ ಸಮೀಪ ನಡೆದ ಅಪಘಾತ ಸಂಭವಿಸಿದ್ದು, ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಾವನ್ನಪ್ಪಿದ್ದಾರೆ.

ರಾಮಾಚಾರಿ (47) ಸಾವನ್ನಪ್ಪಿದ ಕಾನ್‌ಸ್ಟೇಬಲ್. ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ರಾಮಚಾರಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ 1.45 ರ ಸುಮಾರಿಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸಮೀಪ ಬೈಕ್ ನಲ್ಲಿ ಚಲಿಸುತ್ತಿದ್ದ ರಾಮಚಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ತಲೆಗೆ ತೀವ್ರತರ ಪೆಟ್ಟಾಗಿದೆ. ಗಾಯಾಳು ಪೊಲೀಸ್ ಪೇದೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ರಾಮಚಾರಿ ಅವರ ಸಾವಿಗೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ ಸಂತಾಪ ಸೂಚಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....