LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕ್ರಿಕೆಟ್ ಬೆಟ್ಟಿಂಗ್ - ನಗರ ಸಭಾ ಸದಸ್ಯ ಸೇರಿ ನಾಲ್ವರ ಬಂಧನ.....

ಚಿತ್ರದುರ್ಗ -

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ ನಗರ ಸಭಾ ಸದಸ್ಯ ಸೇರಿ ನಾಲ್ಕು ಜನರನ್ನು ಬಂಧಿಸಿರುವ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ.ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ಮಾಡಿ ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗ ಹಾಗೂ ನೂತನ ನಗರ ಸಭೆ ಸದಸ್ಯ ಜಗದೀಶ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ನಡೆ ದ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಲಾ ಗಿದೆ.ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವೆ ಐಪಿಎಲ್ ಪಂದ್ಯ ನಡೆದಿತ್ತು.ಈ ಪಂದ್ಯಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದರು ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು

ಇನ್ನೂ ಮುಖ್ಯವಾಗಿ ಕಳೆದ ತಿಂಗಳು ನಡೆದ ನಗರ ಸಭೆಯ ಉಪಚುನಾವಣೆಯಲ್ಲಿ 15ನೇ ವಾರ್ಡ್‌ ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಗದೀ ಶ್ 548 ಮತಗಳಿಂದ ಗೆಲುವು ಕಂಡಿದ್ದರು.ಚುನಾ ವಣೆಯಲ್ಲಿ ಗೆದ್ದು ತಿಂಗಳು ಕಳೆಯುವ ಮೊದಲೇ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವುದು ಪತ್ತೆಯಾಗಿದೆ.ಜಗದೀಶ್ ಜೊತೆಗೆ ಮಾರುತಿ,ಕಿರಣ್, ರವಿ ಅಲಿಯಾಸ್ ಉಂಡೆರವಿ ಎಂಬುವವರನ್ನು ಬಂಧಿಸಲಾಗಿದೆ.ಬಂಧಿತರಿಂದ ಸುಮಾರು 1 ಲಕ್ಷ ಕ್ಕೂ ಹೆಚ್ಚು ನಗದು ಮತ್ತು 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....