LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕ ಅಮಾನತು - ಅಮಾನತು ಮಾಡಿ ಆದೇಶ ಮಾಡಿದ DDPI.....

ಚಿತ್ರದುರ್ಗ -

ಮುಖ್ಯಮಂತ್ರಿ ವಿರುದ್ಧ ಅವಹೇಳನವಾಗಿ ಪೊಸ್ಟ್ ಮಾಡಿದ ಆರೋಪದ ಮೇಲೆ ಶಿಕ್ಷಕ ರೊಬ್ಬರನ್ನು ಅಮಾನತು ಮಾಡಿರುವ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ ಹೌದು ರಾಜ್ಯದ ನೂತನ ಸರ್ಕಾರ ರಚನೆಯ ಸಂದರ್ಭದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ಶಿಕ್ಷಕ ಅಮಾನತು ಮಾಡಲಾಗಿದೆ

ರಾಜ್ಯದ ವಿಧಾನಸಭಾ ಫಲಿತಾಂಶ ಪ್ರಕಟವಾಗಿ ಒಂದು ವಾರದ ಬಳಿಕ ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇ ಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಂತಮೂರ್ತಿ ಎನ್ನುವವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಿಂದಿನ ಸರ್ಕಾರಗಳಲ್ಲಿ ಮುಖ್ಯಮಂತ್ರಿಗಳು ಮಾಡಿದ್ದ ಸಾಲಗಳ ವಿಚಾರವಾಗಿ ಪ್ರಸ್ತಾಪ ಮಾಡಿದ್ದರು.ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕ ಶಾಂತಮೂರ್ತಿಯವರು ಸಿದ್ದರಾಮಯ್ಯ ಕುರಿತು ಎಲ್ಲ ಮುಖ್ಯಮಂತ್ರಿಗಳು ಮಾಡಿದ ಒಟ್ಟು ಸಾಲ 71, 331 ಕೋಟಿ ಆಗಿದ್ದರೇ, ಸಿದ್ದರಾಮ ಯ್ಯನವರು ಮಾಡಿದ ಸಾಲವೇ 2,42,000 ಕೋಟಿ ಆಗಿದೆ ಎಂದಿದ್ದರು.

ಕಾಂಗ್ರೆಸ್ ಪಕ್ಷ ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ನೂತನ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ವಿಷಯವನ್ನು ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕನ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.

ಈ ದೂರಿನ ಅನ್ವಯ ಜಿಲ್ಲಾಧಿಕಾರಿಗಳು ಡಿಡಿಪಿಐಗೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಡಿಡಿಪಿಐ ಸೂಚನೆ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾ ರಿಗಳು ಶಾಂತಮೂರ್ತಿ ಅವರನ್ನು ಅಮಾನತು ಗೊಳಿಸಿ ಆದೇಶಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....