LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಸಚಿವ ಸುರೇಶ್ ಕುಮಾರ್ ರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ತಿರ್ಮಾನ.....

ಬೆಂಗಳೂರು -

ಶಿಕ್ಷಣ ಸಚಿವರಾಗಿ ಎಸ್.ಸುರೇಶ್ ಕುಮಾರ್ ಅಧಿಕಾರ ವಹಿಸಿಕೊಂಡಾಗಿನಿಂದ ಖಾಸಗಿ ಶಾಲೆ ಗಳನ್ನು ನಿರ್ಲಕ್ಷ್ಯ ಹಾಗೂ ತಾರತಮ್ಯ ಮಾಡುತ್ತಿ ದ್ದಾರೆ. ಹೀಗಾಗಿ ಅವರನ್ನು ಕೂಡಲೇ ಸಚಿವ ಸ್ಥಾನ ದಿಂದ ವಜಾ ಮಾಡಬೇಕೆಂದು ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಶಿಕ್ಷಣ ಸಚಿವ ಸುರೇಶ್‍ಕುಮಾರ್ ಖಾಸಗಿ ಶಾಲೆಗಳ ಶುಲ್ಕ ವಿವಾದವನ್ನು ಉದ್ದೇಶ ಪೂರ್ವಕವಾಗಿ ಹೆಚ್ಚಿ ಸಿ ಬಹುತೇಕ ಶಾಲೆಗಳ ಮೇಲೆ ಸಾರ್ವಜನಿಕರ ಆಕ್ರೋಶ ಹೆಚ್ಚುವಂತೆ ಮಾಡಿದ್ದಾರೆಂದು ಆರೋಪಿ ಸಿದ್ದಾರೆ.

ಸರಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಬೇಕೆಂಬ ಏಕೈಕ ಉದ್ದೇಶದಿಂದ ಶಾಲೆಗಳನ್ನೇ ಪ್ರಾರಂಭಿಸದೆ ಕೇವಲ ಹೆಸರಿಗೆ ಮಾತ್ರ ದಾಖಲಾತಿ ಪ್ರಾರಂಭಿಸಿ ಸರಕಾರಿ ಶಾಲೆಗಳಲ್ಲಿ ಹೊಸದಾಗಿ ಸೇರಿರುವ ಹಾಗೂ ಈಗಾಗಲೇ ಇರುವ ಸುಮಾರು 40 ಲಕ್ಷ ಮಕ್ಕಳಿಗೆ ಶಿಕ್ಷಣವನ್ನೇ ನೀಡದೆ ವಂಚಿಸುತ್ತಿದ್ದಾ ರೆಂದು ಅವರು ತಿಳಿಸಿದ್ದಾರೆ.

ಸರಕಾರಿ ಶಾಲಾ ಮಕ್ಕಳಿಗೆ ಆನ್‍ಲೈನ್ ರೇಡಿಯೋ, ದೂರದರ್ಶನ ಇತ್ಯಾದಿ ಮೂಲಕ ಶಿಕ್ಷಣ ನೀಡುತ್ತೇ ವೆಂದು ಸುಳ್ಳು ಹೇಳುವ ಸಚಿವ ಸುರೇಶ್‍ ಕುಮಾರ್ ಕಳೆದ ವರ್ಷ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನೇ ನೀಡಿಲ್ಲ ಎಂಬ ಸತ್ಯ ಅವರ ಇಲಾಖಾ ಸರ್ವೆ ಮಾಹಿತಿಯಲ್ಲಿ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್ ಸಂಕ್ರಾಮಿಕ ರೋಗದಿಂದ ಉದ್ಯೋಗ ಕಳೆದುಕೊಂಡಿರುವ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎರಡು ತಿಂಗಳಾಯಿತು.ಈ ಹಣವನ್ನು ಬಿಡುಗಡೆ ಮಾಡಿಸುವಲ್ಲಿ ಸಚಿವರು ವಿಫಲರಾಗಿ ದ್ದಾರೆ.ಖಾಸಗಿ ಶಾಲೆಗಳಿಗೆ ಬಾಕಿ ಉಳಿಸಿಕೊಂಡಿ ರುವ RTE ಹಣವನ್ನು ಬಿಡುಗಡೆ ಮಾಡಿಲ್ಲ ಹೀಗಾಗಿ ಸಚಿವ ಸುರೇಶ್‍ ಕುಮಾರ್ ತಮ್ಮ ಖಾತೆಯನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ.ಅವರನ್ನು ಕೂಡಲೇ ವಜಾಮಾಡಿ ಉತ್ತಮರಿಗೆ ನೀಡಬೇಕೆಂ ದು ಅವರು ಒತ್ತಾಯಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....