LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿನ ಕಳ್ಳತನ ಪ್ರಕರಣ - ಶಾಸಕ ಅಮೃತ ದೇಸಾಯಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ......

ಧಾರವಾಡ -

ಧಾರವಾಡದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಗಂಭೀರವಾಗಿ ತಗೆದುಕೊಂಡಿದ್ದಾರೆ. ನಗರದಲ್ಲಿ ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣ ಕುರಿತು ಗೃಹ ಕಚೇರಿಯಲ್ಲಿ ನಗರದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಮಾಡಿದರು.

ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಧಾರವಾಡ ಉಪವಿಭಾಗದ ಎಸಿಪಿ ಅಧಿಕಾರಿ ಅನುಷಾ,ಉಪನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರಮೋದ್ ಯಲಿಗಾರ,ಶಹರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ ಅವರೊಂದಿಗೆ ಸಭೆ ಮಾಡಿದರು .

ಒಂದು ಘಂಟೆಗಳ ಗೃಹ ಕಚೇರಿಯಲ್ಲಿ ನಡೆದ ಸಭೆಸಭೆ ಮಾಡಿದ ಶಾಸಕರು ನಗರದಲ್ಲಿ ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣ ಕುರಿತು ಯಾವ ಯಾವ ಕ್ರಮಗಳನ್ನು ಕೈಗೊಂಡಿದ್ದಿರಿ ಎಂಬ ಕುರಿತು ಮಾಹಿತಿ ಪಡೆದುಕೊಂಡರು.

ಯಾವುದೇ ಕಾರಣಕ್ಕೂ ಕಳ್ಳತನ ಪ್ರಕರಣಗಳ ಕುರಿತು ಸುಮ್ಮನೆ ಇರಬೇಡಿ,ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇಂಥಹ ಘಟನೆಗಳಿಂದ ತಪ್ಪು ಸಂದೇಶ ಹೋಗುತ್ತಿದೆ ಸರಿಯಾಗಿ ಕಟ್ಟು ನಿಟ್ಟಾಗಿ ನಿಯಂತ್ರಣ ಮಾಡಿ ಎಂದು ಸೂಚಿಸಿದರು.

ರಾತ್ರಿ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿ ಎಲ್ಲೇಡೆ ಕಣ್ಗಾವಲು ಇರಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಜೊತೆಯಲ್ಲಿ ಜನರೊಂದಿಗೆ ಸೂಕ್ತವಾದ ಸಹಕಾರ ತಗೆದುಕೊಂಡು ನಿಯಂತ್ರಣ ಮಾಡಿ ಎಂದು ಸೂಚಿದರು‌.

ಈ ಒಂದು ಸಭೆಯಲ್ಲಿ ಮೂರು ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ ,ಎಸಿಪಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರ ಸುನೀಲ ಮೊರೆ,ಶಾಸಕರ ಆಪ್ತ ಕಾರ್ಯದರ್ಶಿ ಪ್ರಕಾಶ ಕಟ್ಟಿ , ಭೀಮಾಶಂಕರ,ಮಂಜುನಾಥ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....