LIVE TV LocalCrimeNationalInternationalPoliticsEducationTechnologyEntertainmentSportsFeature
State News

ದೂರು ನೀಡಿದ ಮುಖ್ಯಶಿಕ್ಷಕಿ - ವಿದ್ಯಾರ್ಥಿಗಳು ಕಡಿಮೆ ಇದ್ದಾರೆಂದು ಹೀಗೆ ಮಾಡೊದಾ......

ದಾಬಸ್‌ಪೇಟೆ -

ಸರ್ಕಾರಿ ಶಾಲಾ ಕಟ್ಟಡ ವನ್ನು ನೆಲಸಮ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕಿ ಯೊಬ್ಬರು ವ್ಯಕ್ತಿ ಯೊಬ್ಬನ ಮೇಲೆ ದೂರು ನೀಡಿದ ಘಟನೆ ದಾಬಸ್ ಪೇಟೆ ಯಲ್ಲಿ ನಡೆದಿದೆ. ಹೌದು ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಗಂಗೇನಪುರ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡವನ್ನು ವ್ಯಕ್ತಿಯೊಬ್ಬ ಕೆಡವಿದ್ದಾರೆ

ಈ ಸಂಬಂಧ ಭಾನುಪ್ರಕಾಶ್ ಎಂಬಾತನ ವಿರುದ್ಧ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಾಲಾ ಮುಖ್ಯ ಶಿಕ್ಷಕಿ ನಾಗರತ್ನ ಅವರು ದೂರು ನೀಡಿದ್ದಾರೆ.ಹಿಂದೆ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಿತ್ತು ಮಕ್ಕಳು ಕಡಿಮೆಯಾದ ನಂತರ 1995-96ರಲ್ಲಿ ಶಾಲೆ ಯನ್ನು ಕಿರಿಯ ಪ್ರಾಥಮಿಕ ಶಾಲೆಗಷ್ಟೇ ಸೀಮಿತ ಗೊಳಿಸಲಾಯಿತು.

ಪ್ರಸ್ತುತ ಶಾಲೆಯಲ್ಲಿ ಇಬ್ಬರು ಶಿಕ್ಷಕರಿದ್ದು, ಸುಮಾರು 20 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಶಾಲೆಯ ಕಟ್ಟಡವನ್ನು ಭಾನುಪ್ರಕಾಶ್ ಜೆಸಿಬಿ ಯಿಂದ ನೆಲಸಮ ಮಾಡಿದ್ದಾರೆ.ಅಲ್ಲಿ ಕಲಿಯು ತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಶಾಲೆಯಲ್ಲಿ ಓದಿದ ಅನೇಕರು ಅತ್ಯುನ್ನತ ಸ್ಥಾನದಲ್ಲಿದ್ದಾರೆ.

ಯಾವುದೇ ಅನುಮತಿ ಅಥವಾ ದಾಖಲೆ ಇಲ್ಲದೆ ಅದನ್ನು ಕೆಡವಲು ಇವರಿಗೆ ಅನುಮತಿ ಕೊಟ್ಟ ವರು ಯಾರು ಎಂದು ಪಂಚಾಯಿತಿ ಸದಸ್ಯ ದಿನೇಶ ನಾಯಕ ಪ್ರಶ್ನಿಸಿದ್ಧಾರೆ.ಶಾಲೆಯ ಕಟ್ಟಡ ಶಿಕ್ಷಣ ಇಲಾಖೆಗೆ ಸೇರಿದ್ದು, 1995ರಿಂದ ಶಾಲೆಯ ಜಾಗ ನಮ್ಮದು ಎಂಬುದಕ್ಕೆ ನಮ್ಮ ಬಳಿ ದಾಖ ಲಾತಿ ಇದೆ.

ಆದರೂ ಖಾಸಗಿ ವ್ಯಕ್ತಿ ಶಾಲೆಯನ್ನು ಕೆಡವಿದ್ದಾರೆ. ಈ ಕುರಿತು ಪೋಲಿಸ್ ಇಲಾಖೆಗೆ ದೂರು ನೀಡ ಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ತಿಮ್ಮಯ್ಯ ತಿಳಿಸಿದ್ದಾರೆ.ದಾಬಸ್‌ಪೇಟೆ ಠಾಣೆಯ ಪೋಲಿಸ್ ಸಿಬ್ಬಂದಿ ಮತ್ತು ಕಂದಾಯ ಅಧಿಕಾರಿ ಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ದಾಬಸ್ ಪೇಟೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....