LIVE TV LocalCrimeNationalInternationalPoliticsEducationTechnologyEntertainmentSportsFeature
International News

ಟ್ರಾಫಿಕ್ ಸಮಸ್ಯೆಯಿಂದ ಬೇಸತ್ತು ಪೊಲೀಸ್ ಠಾಣೆ ಗೆ ತೆರಳಿದ UKG ಪೊಲೀಸ್ ಠಾಣೆಗೆ ಹೋಗಿ ವಿದ್ಯಾರ್ಥಿ ಕಾರ್ತಿಕ್ ಪೊಲೀಸರಿಗೆ ಪ್ರಶ್ನೆ ಮಾಡಿದ್ದೇನು ಗೊತ್ತಾ ವೈರಲ್ ಆಗಿದೆ ಪೊಟೊ.....

ತಿರುಪತಿ -

ಶಾಲೆಗೆ ತೆರಳುವ ಮಾರ್ಗದಲ್ಲಿ ಎದುರಿಸುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಮಧ್ಯಸ್ಥಿಕೆ ವಹಿಸುವಂತೆ ಕೋರಿ ಆರು ವರ್ಷದ ಯುಕೆಜಿ ವಿದ್ಯಾರ್ಥಿ ಸ್ಥಳೀಯ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದ ವಿಚಿತ್ರ ಘಟನೆ ತಿರುಪತಿಯಲ್ಲಿ ನಡೆದಿದೆ.ಚಿತ್ತೂರು ಜಿಲ್ಲೆಯ ಪಲಮನೇರ್‌ನಲ್ಲಿ ಈ ಒಂದು ಘಟನೆ ನಡೆದಿದ್ದು ಬಾಲಕ ಪೊಲೀಸರೊಂದಿಗೆ ಮಾತನಾಡಿ ರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ವಿಡಿಯೋದಲ್ಲಿ, ಆದರ್ಶ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಬಾಲಕ ಈ ಪ್ರದೇಶದಲ್ಲಿ ರಸ್ತೆಗಳನ್ನು ಅಗೆಯಲಾ ಗಿದೆ.ತನ್ನ ಶಾಲೆಗೆ ಹೋಗುವ ಮಾರ್ಗವನ್ನು ಟ್ರ್ಯಾಕ್ಟರ್‌ ಗಳು ನಿರ್ಬಂಧಿಸಿ ಅಡ್ಡಿಪಡಿಸುತ್ತಿವೆ ಎಂದು ಪೊಲೀಸರಿಗೆ ದೂರು ನೀಡುತ್ತಿರುವುದು ಕಂಡುಬಂದಿದೆ.

ವಿದ್ಯಾರ್ಥಿಗಳು ತಮ್ಮ ಶಾಲೆಗೆ ತೆರಳಲು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದು ಟ್ರಾಫಿಕ್ ಸಮಸ್ಯೆ ನಿವಾರಿ ಸುವಂತೆ ಪಲಮನೇರ್ ಸರ್ಕಲ್ ಇನ್ಸ್‌ ಪೆಕ್ಟರ್ ಎನ್. ಭಾಸ್ಕರ್ ಅವರನ್ನು ಬಾಲಕ ಕೇಳಿಕೊಂಡಿದ್ದಾನೆ.ಭಾಸ್ಕರ್ ಅವರು ಬಾಲಕ ಕಾರ್ತಿಕ್‌ ಗೆ ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.ಅವರ ಸಂಪರ್ಕ ಸಂಖ್ಯೆಯನ್ನು ಕೂಡ ನೀಡಿ ಏನಾದರೂ ಸಮಸ್ಯೆಗಳಿದ್ದರೆ ಯಾವುದೇ ಸಮಯದಲ್ಲಿ ಕರೆ ಮಾಡಲು ತಿಳಿಸಿದ್ದಾರೆ. ಶಾಲಾ ಆವರಣದಲ್ಲಿ ಡ್ರೈನೇಜ್ ಬ್ಲಾಕ್ ಇರುವುದರಿಂದ ಕಾಮಗಾರಿ ನಡೆಯುತ್ತಿದ್ದು ಆಗಾಗ ಆಗುವ ಟ್ರಾಫಿಕ್ ಜಾಮ್‌ ಆಗುವುದನ್ನು ತಪ್ಪಿಸಲು ಪೊಲೀಸರು ಬ್ಯಾರಿಕೇಡ್‌ ಗಳನ್ನು ಹಾಕಿದ್ದಾರೆ ಎಂದು ಭಾಸ್ಕರ್ ತಿಳಿಸಿದ್ದಾರೆ.ಇದು ಅತ್ಯಂತ ಜನನಿಬಿಡ ಜಂಕ್ಷನ್ ಆಗಿದ್ದು ಒಳಚರಂಡಿ ದುರಸ್ತಿ ಕಾಮಗಾರಿ ನಡೆಯುತ್ತಿದೆ. ವಾಹನಗಳ ಸಂಚಾರ ನಿಯಂ ತ್ರಿಸಲು ಬ್ಯಾರಿಕೇಡ್‌ ಗಳನ್ನು ಹಾಕಿರುವುದರಿಂದ ಸ್ವಲ್ಪ ತೊಂದರೆಯಾಯಿತು. ಆರು ವರ್ಷದ ಬಾಲಕ ತನ್ನ ತಂದೆಯೊಂದಿಗೆ ಯಾವುದೇ ಭಯವಿಲ್ಲದೆ ಪೊಲೀಸ್ ಠಾಣೆಗೆ ಬಂದು ಟ್ರಾಫಿಕ್ ಸಮಸ್ಯೆಯ ಬಗ್ಗೆ ದೂರು ನೀಡಿರುವುದು ನಮಗೆ ಆಶ್ಚರ್ಯ ತಂದಿದೆ. ಆದಷ್ಟು ಬೇಗ ಟ್ರಾಫಿಕ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದೇ ವೆ ಎಂದು ಇನ್ಸ್‌ ಪೆಕ್ಟರ್ ಭಾಸ್ಕರ್ ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....