LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬೇಸಿಗೆ ರಜೆ ಘೋಷಣೆ ಯಲ್ಲಿ ತಾರತಮ್ಯ ಹೈಸ್ಕೂಲ್ ಶಿಕ್ಷಕರ ಅಸಮಾಧಾನ.....

ಬೆಂಗಳೂರು -

ಕೊನೆಗೂ ರಾಜ್ಯ ಸರ್ಕಾರ ನಿನ್ನೆಯಷ್ಟೇ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬೇಸಿಗೆ ರಜೆಯನ್ನು ಘೋಷಣೆ ಮಾಡಿದೆ. ಕರೋನ ಮಹಾಮಾರಿಯ ನಡುವೆ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಶಿಕ್ಷಕರಿಗೆ ಬೇರೆ ಅವಧಿಯ ಲ್ಲಿ ಬೇಸಿಗೆ ರಜೆ ಘೋಷಿಸಲಾಗಿದೆ.ರಜೆ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಈ ನಡೆಗೆ ಪ್ರೌಢಶಾಲಾ ಶಿಕ್ಷಕರು ಅಸಮಾಧಾನಗೊಂಡಿದ್ದಾರೆ

ಹೌದು ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಮೇ 1ರಿಂದ ಜೂನ್‌ 14 ರವರೆಗೆ ಹಾಗೂ ಪ್ರೌಢ ಶಾಲೆಗಳ ಶಿಕ್ಷಕ ರಿಗೆ ಜೂನ್‌ 15 ರಿಂದ ಜುಲೈ 14 ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ.

ಬೇಸಿಗೆ ರಜೆ ನೀಡುವ ವಿಷಯದಲ್ಲಿ ಶಿಕ್ಷಣ ಇಲಾಖೆ ಯ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ.ಹಿಂದೆ ಂದೂ ಈ ರೀತಿ ಆಗಿರಲಿಲ್ಲ.ಈ ವಿಚಾರವನ್ನು ಸರ್ಕಾರ ಮರುಪರಿಶೀಲಿಸಿ ಮಾರ್ಗಸೂಚಿ ಬದಲಿಸ ಬೇಕು ಎಂದು ಪ್ರೌಢ ಶಾಲೆಯ ಶಿಕ್ಷಕರು ಆಗ್ರಹಿಸಿ ದ್ದಾರೆ.

ಇಲ್ಲಿಯವರೆಗೆ ಒಂದೇ ರೀತಿ ಇತ್ತು. ಈ ಬಾರಿಯೂ ಕೋವಿಡ್‌ ಜೊತೆಗೆ ಬಿಸಿಲಿನ ಸಮಸ್ಯೆ ಇದೆ.ಸದ್ಯ ನಿಗದಿಪಡಿಸಿರುವಂತೆ SSLC ಪರೀಕ್ಷೆಗಳು ಜೂನ್‌ 21 ರಿಂದ ಆರಂಭಗೊಂಡು ಜುಲೈ 5 ರವರೆಗೆ ನಡೆ ಯಲಿದೆ. SSLC ಪರೀಕ್ಷೆ ಸಂದರ್ಭದಲ್ಲಿ ಎಲ್ಲ ಆರೂ ವಿಷಯಗಳ ಶಿಕ್ಷಕರೂ ಶಾಲೆಗಳಲ್ಲಿ ಹಾಜರಿರಬೇಕಾ ಗುತ್ತದೆ.

ಬಳಿಕ ಮೌಲ್ಯಮಾಪನದಲ್ಲಿ ಭಾಗವಹಿಸ ಬೇಕು. ಪರೀಕ್ಷೆ ಮತ್ತು ಮೌಲ್ಯಮಾಪನ ಕೆಲಸದಲ್ಲಿ ಯೇ ಬೇಸಿಗೆ ರಜೆ ಮುಗಿದು ಹೋಗುತ್ತದೆ ಎಂಬ ಆತಂಕ ದಲ್ಲಿ ಶಿಕ್ಷಕರಿದ್ದಾರೆ. ಇದರಿಂದ ನಮಗೆ ಅನ್ಯಾಯವಾ ಗುತ್ತದೆ ಎನ್ನುವುದು ಪ್ರೌಢ ಶಿಕ್ಷಕರ ಆಕ್ಷೇಪ ವಾಗಿದ್ದು ಹೀಗಾಗಿ ಇದನ್ನು ಅರಿತ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಏನು ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....