LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕೋವಿಶಿಲ್ಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ -

ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದರು‌. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಲಸಿಕೆ ಪಡೆಯಲು ನೋಂದಣಿ ಮಾಡಿಕೊಂಡಿದ್ದ 28750 ಆರೋಗ್ಯ ಕಾರ್ಯಕರ್ತರ ಪೈಕಿ ಇದುವರೆಗೆ 14191 ಜನ ಮೊದಲ ಡೋಸ್, 4156 ಜನ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.ಇದೀಗ ಮಹಾನಗರಪಾಲಿಕೆ, ಸ್ಥಳೀಯಸಂಸ್ಥೆಗಳು,ಕಂದಾಯ,ಗ್ರಾಮೀಣಾಭಿವೃದ್ಧಿ ಇಲಾಖೆಯ 8775 ಜನ ನೋಂದಣಿ ಮಾಡಿಕೊಂಡಿ ದ್ದಾರೆ.ಈವರೆಗೆ 3292 ಜನ ಅಂದರೆ ಶೇ.37.5 ರಷ್ಟು ಲಸಿಕೆ ಪಡೆದಿದ್ದಾರೆ.ಉಳಿದವರೂ ಕೂಡ ನಿಗದಿತ ದಿನಗಳಂದು ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯಬೇಕು ಎಂದರು.

ಈಗಾಗಲೇ ಲಸಿಕೆ ನೋಂದಣಿಯಾಗಿ ಅನೇಕ ಬಾರಿ ಎಸ್‍ಎಂಎಸ್ ಮತ್ತಿತರ ಮಾಹಿತಿ ಬಂದಿದ್ದರೂ ಕೂಡ ಲಸಿಕೆ ಪಡೆಯಲು ಸಾಧ್ಯವಾಗದಿರುವವರಿಗೆ ಫೆ.22,23 ಹಾಗೂ 24 ರಂದು ಮಾಪ್ ಅಪ್ ಅಭಿಯಾನದ ಮೂಲಕ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಈ ಮೂರು ದಿನಗಳಲ್ಲಿ ಅವರು ಯಾವುದೇ ಸಂದೇಶಗಳು ಬಾರದಿದ್ದರೂ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಶೀಲ್ಡ್ ಲಸಿಕೆ ಪಡೆಯಬಹುದು. ಕೊರೊನಾ ವೈರಾಣು ನಿರ್ಮೂಲನೆಯಾಗಿಲ್ಲ ,ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ನಿರ್ಲಕ್ಷಿಸದೇ ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಕೆ.ಮಾನಕರ್,ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಮತ್ತಿತರರು ಇದ್ದರು.


Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....