LIVE TV LocalCrimeNationalInternationalPoliticsEducationTechnologyEntertainmentSportsFeature
State News

ದ್ವಿತೀಯ ಪಿಯು ಪರೀಕ್ಷೆ ಮುಂದೂ ಡಿಕೆ - ಪ್ರಥಮ ಪಿಯು ವಿದ್ಯಾರ್ಥಿ ಗಳ ತೇರ್ಗಡೆ ಸುರೇಶ್ ಕುಮಾರ್ ಮಾಹಿತಿ.....

ಬೆಂಗಳೂರು -

ಮಹಾಮಾರಿ ಕೋವಿಡ್ ಹಿನ್ನೆಲೆಯಲ್ಲಿ ಮೇ 24 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಹಾಗೇ ಮುಂದಿ ನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸ ಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು. ಬೆಂಗ ಳೂರಿನಲ್ಲಿ ಮಾತನಾಡಿದ ಅವರು ಈ ಒಂದು ಮಾಹಿತಿಯನ್ನು ನೀಡಿದರು.

ಇಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.ಈಗಾಗಲೇ ಪರೀಕ್ಷೆ ಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಯಾವುದೇ ಕಾರಣ ಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾ ಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದರು

ಇನ್ನೂ ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸ ಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀ ಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾ ಗಿದೆ.ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರ ವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು

ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿ ರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು  ಸೂಚಿಸಲಾಗಿದೆ.ವಿದ್ಯಾರ್ಥಿ ಗಳೊಂದಿಗೆ ನಿರಂತರ ಸಂಪರ್ಕ ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸು ವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ  ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳ ನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್  ತಿಳಿಸಿದರು.

ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪರೀಕ್ಷೆ ಮುಂದೂ ಡುವ ನಿರ್ಧಾರಕ್ಕೆ ಬರಲಾಗಿದೆ ಎಂದರು‌ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....