LIVE TV LocalCrimeNationalInternationalPoliticsEducationTechnologyEntertainmentSportsFeature
State News

10 ಲಕ್ಷ ರೂ ಮೌಲ್ಯದ ಡ್ರಗ್ಸ್ ಜಪ್ತಿ ನಾಲ್ವರ ಬಂಧನ - ಕೇರಳ ದಿಂದ ರಾಜ್ಯಕ್ಕೆ ಮಾರಾಟ ಮಾಡಲು ಬಂದಿದ್ದ ಆರೋಪಿಗಳು.....

ಮಂಗಳೂರು -

ಡ್ರಗ್ಸ್ ವಿರುದ್ಧ ಮುಂದುವರಿದ ಮಂಗಳೂರು ಪೊಲೀಸ್ ಕಾರ್ಯಾಚರಣೆ 10 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ ಹೌದು ಡ್ರಗ್ಸ್ ಮಾಫಿಯಾ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 10 ಲಕ್ಷ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆ ಮತ್ತು ಕಮಿಷನರೇಟ್ ವ್ಯಾಪ್ತಿಯ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗ ಳನ್ನು ನಡೆಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗ್ಡೆ ನೇತೃತ್ವದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಫಳ್ನೀರ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಬೆಂಗಳೂರಿನಿಂದ ತಂದಿದ್ದು ಎನ್ನಲಾದ ಎಂಡಿಎಂಎ ಅನ್ನು ವಶಪಡಿಸಿಕೊಳ್ಳ ಲಾಗಿದೆ ಇದನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಕೇರಳದ ಕಾಸರಗೋಡು ಜಿಲ್ಲೆಯ ಮೊಹಮ್ಮದ್ ಹನೀಫ್, ಸೈಯದ್ ಫೌಜಾನ್​,ಸಿರಾಜುದ್ದೀನ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.ಕಾರ್ಯಾಚರಣೆಯಲ್ಲಿ 5,00,000 ರೂಪಾಯಿ ಮೌಲ್ಯದ 100 ಗ್ರಾಂ ಎಂಡಿಎಂಎ, 4000 ರೂಪಾಯಿ ನಗದು, ಒಂದು ಮಾರುತಿ ಸ್ವಿಫ್ಟ್ ಕಾರು, ಮೂರು ಮೊಬೈಲ್ ಫೋನ್‌ಗಳು ಮತ್ತು ಡಿಜಿಟಲ್ ತೂಕದ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ.

ಒಟ್ಟು ಮೌಲ್ಯ 10,94,500 ರೂಪಾಯಿ ಎಂದು ಅಂದಾಜಿಸಲಾಗಿದೆ.ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮತ್ತೊಂದು ಕಾರ್ಯಾ  ಚರಣೆಯಲ್ಲಿ ಅಳಪೆ ಗ್ರಾಮದ ಕಂಕನಾಡಿ ರೈಲು ನಿಲ್ದಾಣದ ರಸ್ತೆಯ ಬಳಿ ಅಕ್ರಮವಾಗಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಬಂಧಿತ ಆರೋಪಿ ಇಬ್ರಾಹಿಂ ಅರ್ಷದ್ ವಿಕೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಿಯಪದವು ನಿವಾಸಿಯಾಗಿದ್ದಾನೆ. ಈತನ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಮಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....