LIVE TV LocalCrimeNationalInternationalPoliticsEducationTechnologyEntertainmentSportsFeature
State News

ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ - ಪೋಷಕರಿಗೆ ಮತ್ತೊಂದು ಹೊರೆ.....

ಬೆಂಗಳೂರು -

ರಾಜ್ಯದ ಖಾಸಗಿ ಶಾಲೆಗಳು ಈ ವರ್ಷವೂ ಶೇ.15ರಷ್ಟು ಶುಲ್ಕ ಏರಿಕೆ ಸಾಧ್ಯತೆ ಇದೆ ಹೌದು ಪ್ರತಿವರ್ಷದಂತೆ ಈ ಬಾರಿಯೂ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುವ ಲಕ್ಷಣಗಳು ಕಾಣಿ ಸುತ್ತಿವೆ ರಾಜ್ಯಾದ್ಯಂತ ಇರುವ ಖಾಸಗಿ ಶಾಲೆಗಳು 2026-27ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಶಾಲಾ ಶುಲ್ಕವನ್ನು ಹೆಚ್ಚಿಸಲು ನಿರ್ಧರಿಸಿವೆ

ಖಾಸಗಿ ಶಾಲೆಗಳ ಒಕ್ಕೂಟದ ಪ್ರಕಾರ, ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಶಾಲಾ ವಾಹನಗಳ ಇಂಧನ ವೆಚ್ಚ ಮತ್ತು ಶಿಕ್ಷಕರ ವೇತನದ ಹೊರೆ ಹೆಚ್ಚಾಗಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಗಳು ಅನಿವಾರ್ಯವಾಗಿ ಶುಲ್ಕ ಹೆಚ್ಚಳದ ಹಾದಿ ಹಿಡಿದಿವೆ ಎನ್ನಲಾಗಿದೆ.

ಹೆಚ್ಚಳದ ಪ್ರಮಾಣ ಒಕ್ಕೂಟದ ಮಾಹಿತಿ ಪ್ರಕಾರ ಈ ವರ್ಷ ಶೇ. 5 ರಿಂದ ಶೇ. 15 ರಷ್ಟು ಶುಲ್ಕ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಯಾವುದೇ ಕಾರಣಕ್ಕೂ ಶೇ. 15ಕ್ಕಿಂತ ಹೆಚ್ಚು ಶುಲ್ಕವನ್ನು ಏರಿಕೆ ಮಾಡಬಾರದು ಎಂದು ಖಾಸಗಿ ಶಾಲೆಗಳ ಒಕ್ಕೂಟವು ತನ್ನ ಸದಸ್ಯ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಯಾವ ಶಾಲೆ ಎಷ್ಟು ಪ್ರಮಾಣದಲ್ಲಿ ಶುಲ್ಕ ಏರಿಕೆ ಮಾಡಬೇಕು ಎಂಬ ನಿರ್ಧಾರ ವನ್ನು ಆಯಾ ಶಾಲಾ ಆಡಳಿತ ಮಂಡಳಿಗೇ ಬಿಡಲಾಗಿದೆ.

ಪೋಷಕರ ಸಮನ್ವಯ ಸಮಿತಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಖಾಸಗಿ ಶಾಲೆಗಳ ಈ ಏಕಪಕ್ಷೀಯ ನಿರ್ಧಾರಕ್ಕೆ ಪೋಷಕರ ಸಮನ್ವಯ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ ಈಗಾಗಲೇ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ಶಾಲಾ ಶುಲ್ಕ ಹೆಚ್ಚಿಸುವುದು ಪೋಷಕರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದಂತಾಗುತ್ತದೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ.

ಸರಕಾರವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಅನಗತ್ಯ ಶುಲ್ಕ ಏರಿಕೆಗೆ ಲಗಾಮು ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....