LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕೊನೆಗೂ ಅಂತರ್ ನಿಗಮಗಳ ವರ್ಗಾವಣೆಗೆ ಗ್ರೀನ್ ಸಿಗ್ನಲ್ - ಮಾರ್ಗಸೂಚಿ ಬಿಡುಗಡೆ.....

ಬೆಂಗಳೂರು -

ರಾಜ್ಯ ಸಾರಿಗೆ ನಿಗಮಗಳ ಅಂತರ ನಿಗಮ ವರ್ಗಾವಣೆಗೆ ಹಸಿರು ನಿಶಾನೆ ನೀಡಲಾಗಿದ್ದು ಇಲಾಖೆ ಕೆಲವೊಂದಿಷ್ಟು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಏಪ್ರಿಲ್ 1 ರಿಂದ 30 ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.

ಅರ್ಜಿಯನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ಸಲ್ಲಿಸಬೇಕಿದ್ದು, ನಿಗದಿತ ನಮೂನೆಯಲ್ಲಿ ಸ್ಕ್ಯಾನ್ ಮಾಡಲಾದ ಸಹಿ ಮತ್ತು ಇತ್ತೀಚಿನ ಪಾಸ್ ಪೋರ್ಟ್ ಭಾವಚಿತ್ರವನ್ನು ಅಪ್ಲೋಡ್ ಮಾಡ ಬೇಕಿದೆ. ಅರ್ಜಿ ಭರ್ತಿ ಮಾಡಿ ಸಲ್ಲಿಸಿದ ನಂತರ ಪ್ರಿಂಟ್ ತೆಗೆದುಕೊಂಡು ನಿಗದಿತ ಸ್ಥಳದಲ್ಲಿ ಸಹಿ ಮಾಡಬೇಕು. ಸಂಬಂಧಿಸಿದ ವಿಭಾಗದ ಸಹಾಯಕ ಆಡಳಿತಾಧಿಕಾರಿಗೆ ಅರ್ಜಿಯನ್ನು ಸಲ್ಲಿಸಿ ಸ್ವೀಕೃತಿ ಪಡೆಯಬೇಕು.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಅಂತರ ನಿಗಮ ವರ್ಗಾವಣೆ ಒಂದಾಗಿತ್ತು. ಆರನೇ ವೇತನ ಆಯೋಗದ ಶಿಫಾರಸು ಜಾರಿ ಹೊರತಾಗಿ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕ್ರಮವನ್ನು ಕೈಗೊಳ್ಳಲಾಗಿದೆ.

ಇನ್ನೂ ವರ್ಗಾವಣೆ ಬಯಸುವ ನೌಕರರು ಮಾತೃ ನಿಗಮದಲ್ಲಿ ಪರೀಕ್ಷಾರ್ಥ ದಿನಾಂಕದಿಂದ ಕನಿಷ್ಠ 10 ವರ್ಷಗಳ ಕಾಲ ಸೇವೆ ಸಲ್ಲಿಸಿರಬೇಕು ಎಂದು ಹೇಳಲಾಗಿದೆ.ಒಟ್ಟಾರೆ ಏನೇ ಆಗಲಿ ವರ್ಗಾವಣೆಗೆ ಒಪ್ಪಿಗೆ ಸಿಕ್ಕಿದ್ದು ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಾಕಷ್ಟು ಪ್ರಮಾಣದಲ್ಲಿ ಸಂತಸಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....