LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮಾಜಿ ಶಾಸಕ ಗುರು ಜೇಕಬ್ ಇನ್ನಿಲ್ಲ - ಶಾಸಕರ ನಿಧನಕ್ಕೆ ಜಿಲ್ಲೆಯ ಗಣ್ಯರು ಸಂತಾಪ.....

ಕಲಘಟಗಿ -

ಕಲಘಟಗಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಗುರು ಜೇಕಬ್ ನಿಧನರಾಗಿದ್ದಾರೆ‌. ಕಲಘಟಗಿಯ
ತುಮರಿಕೊಪ್ಪ ಹೈಸ್ಕೂಲಿನ ಸಂಸ್ಥಾಪಕರು, ಕಲಘಟಗಿ ತಾಲೂಕಿನಲ್ಲಿ ಶಿಕ್ಷಣ ಕ್ರಾಂತಿ ಮೂಡಿಸಿದ ಹರಿಕಾರ,ಬಡವರ ಬಂಧು,ಜನ ಸಾಮಾನ್ಯರ ಪಾಲಿನ ಕುಬೇರ,ಕಲಘಟಗಿ ತಾಲೂಕಾ ಅಭಿವೃದ್ದಿ ಮಂಡಳಿಯ ಮಾಜಿ ಅಧ್ಯಕ್ಷರು ತಮ್ಮ ಸಂಸ್ಥೆ ಯಿಂದ ರಸ್ತೆ,ಮನೆಗಳನ್ನು ನಿರ್ಮಿಸಿ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಸಾಕಾರಗೊಳಿಸಿದ ಸಾತ್ವಿಕ, ಪ್ರಾಮಾಣಿಕ ರಾಜಕಾರಿಣಿ ಎಂದೇ ಹೆಸರಾಗಿದ್ದರು.

ತಾಲೂಕಿನ ಮಾಜಿ ಶಾಸಕರು ಅನೇಕರಿಗೆ ಬದುಕು ಕಟ್ಟಿಕೊಟ್ಟ ಸಹೃದಯಿಗಳು,ಬೆಣಚಿಕೆರೆ ನಿರ್ಮಿಸಿ ಪಟ್ಟಣಕ್ಕೆ ಕುಡಿಯುವ ನೀರು ದೊರಕುವಂತೆ ಮಾಡಿದ ಸೃಷ್ಟಿ ಪುರುಷ,ಪರಮಪೂಜ್ಯ,ರೆ.ಫಾದರ್ ಪಿ.ಜೆ.ಜಾಕೋಬರವರು ತಮ್ಮ 90 ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ‌. ಇನ್ನೂ ಇವರ ನಿಧನಕ್ಕೆ ಜಿಲ್ಲೆಯ ರಾಜಕೀಯ ನಾಯಕರು ಸಂತಾಪ ಸೂಚಿ ಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಜಗದೀಶ್ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ,ಶಂಕರ ಪಾಟೀಲ ಮುನೇನಕೊಪ್ಪ,ಸಿ ಎಮ್ ನಿಂಬಣ್ಣವರ ಮಾಜಿ ಸಚಿವ ಸಂತೋಷ ಲಾಡ್,ಸೇರಿದಂತೆ ಹಲವು ಗಣ್ಯರು ಅಗಲಿದ ಮಾಜಿ ಶಾಸಕರಿಗೆ ಸಂತಾಪ ಸೂಚಿಸಿದ್ದಾರೆ‌

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....