LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉಸಿರುಗಟ್ಟಿಸಿ ಹೆತ್ತ ಮಕ್ಕಳಿಬ್ಬರನ್ನು ಸಾಯಿಸಿದ ತಾಯಿ - ಪೊಲೀಸ್ ಠಾಣೆ ಗೆ ಕರೆ ಮಾಡಿ ಕೊಲೆ ಮಾಹಿತಿ ನೀಡಿದ ಗಂಗಾದೇವಿ.....

ಬೆಂಗಳೂರು -

ಹತ್ತ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ  ಬೆಂಗಳೂರಿ ನಲ್ಲಿ ನಡೆದಿದೆ. ಹೌದು ನಗರದ ಜಾಲಹಳ್ಳಿ ಯಲ್ಲಿ ಈ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ ಜಾಲಹಳ್ಳಿಯ ನಿವಾಸಿಗಳಾದ ಲಕ್ಷ್ಮೀ (9) ಹಾಗೂ ಗೌತಮ್ (7) ಕೊಲೆಯಾದ ದುರ್ದೈವಿಗಳಾಗಿದ್ದಾರೆ

ಮಕ್ಕಳನ್ನು ಕೊಲೆ ಮಾಡಿದ ತಾಯಿ ಗಂಗಾದೇವಿ, ತಾನೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ದ್ದಾಳೆ ಸ್ಥಳಕ್ಕೆ ಬಂದ ಹೊಯ್ಸಳ ಸಿಬ್ಬಂದಿ ಪರಿಶೀ ಲನೆ ನಡೆಸಿ ಆರೋಪಿ ಗಂಗಾದೇವಿಯನ್ನು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಗಂಗಾದೇವಿ ಕುಟುಂಬ ಜಾಲಹಳ್ಳಿಯಲ್ಲಿ ನೆಲೆಸಿತ್ತು.ಆರೋಪಿ ಗಂಗಾ ದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೆ ಆಕೆ ಪತಿ ಬಿಬಿಎಂಪಿಯ ಗುತ್ತಿಗೆ ಆಧಾರದ ಪೌರ ಕಾರ್ಮಿ ಕನಾಗಿ ಕೆಲಸ ಮಾಡುತ್ತಿದ್ದ.

ಮಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವು ದಾಗಿ ಪತಿಯ ವಿರುದ್ಧ ಗಂಗಾದೇವಿ ಮತ್ತು ತನ್ನ ಪುತ್ರಿ ಜೊತೆಯಲ್ಲಿ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಿದ್ದರು.ಪೋಕ್ಸೊ ಪ್ರಕರಣ ದಾಖಲಿ ಸಿಕೊಂಡಿದ್ದ ಪೊಲೀಸರು ಗಂಗಾದೇವಿ ಮತ್ತು ಬಾಲಕಿಗೆ ಕೌನ್ಸಲಿಂಗ್ ಮಾಡಿ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಕೊಡಿಸಿದ್ದರು.

ಅಲ್ಲದೆ ಬಾಲಕಿ ತಂದೆಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಕ್ಕಳೊಂದಿಗೆ ನೆಲೆಸಿದ್ದ ಗಂಗಾದೇವಿ ಯುಗಾದಿ ಹಬ್ಬವನ್ನು ಆಚರಿಸಿದ್ದರು ಹಬ್ಬದ ಊಟವನ್ನು ಸವಿದು ಮಕ್ಕಳೊಂದಿಗೆ ಗಂಗಾದೇವಿ ಮಲಗಿದ್ದ ಳು ತಡರಾತ್ರಿ ಮಲಗಿದ್ದ ಮಕ್ಕಳನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.

ಬಳಿಕ ತಾನು ಆತ್ಮಹತ್ಯೆಗೆ ನಿರ್ಧರಿಸಿದ್ದಳು. ಕೊನೆಗೆ ತಡರಾತ್ರಿ 1 ಗಂಟೆಯಲ್ಲಿ ಗಂಗಾದೇವಿ ನಮ್ಮ 112ಗೆ ಕರೆ ಮಾಡಿ ಮನೆಯಲ್ಲಿ ಗಲಾಟೆ ನಡೆಯುತ್ತಿದ್ದು ಪೊಲೀಸರ ನೆರವು ಬೇಕೆಂದು ಕೋರಿದ್ದಳು ದೂರು ಸ್ವೀಕರಿಸಿದ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ನೋಡಿದಾಗ ಪೊಲೀಸರ ಎದುರು ಗಂಗಾದೇವಿ ತಾನೇ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.

ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಮರ ಣೋತ್ತರ ಪರೀಕ್ಷೆಗೆ ಒಳಪಡಿಸಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡು ಆರೋಪಿ ಗಂಗಾದೇ ವಿಯನ್ನು ಬಂಧಿಸಿದ್ದಾರೆ ಮಕ್ಕಳ ಕೊಲೆ ಪ್ರಕರಣ ವನ್ನು ಎಲ್ಲ ಆಯಾಮದಲ್ಲಿ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....