LIVE TV LocalCrimeNationalInternationalPoliticsEducationTechnologyEntertainmentSportsFeature
International News

ಮುಖೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ

ಮುಂಬೈ -

ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಖೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಕಾರು ಪತ್ತೆಯಾಗಿದೆ. ಸ್ಕಾರ್ಪಿಯೊ ಕಾರಿನಲ್ಲಿ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ. ಸ್ಥಳಕ್ಕೆ ಎಟಿಎಸ್, ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಶ್ವಾನ ದಳ, ಬಾಂಬ್ ಪತ್ತೆ & ನಿಷ್ಕ್ರಿಯ ದಳದ ತಜ್ಞರು ದೌಡಾಯಿಸಿದ್ದಾರೆ.

ಮುಖೇಶ್ ಅಂಬಾನಿಯವರ ಅಂತಿಲ್ಲಾ ನಿವಾಸದ ಬಳಿ ಸ್ಕಾರ್ಪಿಯೊ ವಾಹನವೊಂದು ಮನೆಯ ಬಳಿ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಜೆಲೆಟಿನ್ ಕಡ್ಡಿಗಳು ಇರುವುದು ಕಂಡುಬಂದಿದೆ.

ಅಂದ ಹಾಗೆ, ಈ ಸ್ಕಾರ್ಪಿಯೊ ವಾಹನದ ನೊಂದಣಿ ಸಂಖ್ಯೆ ಉದ್ಯಮಿಯ ಭದ್ರತಾ ಸಿಬ್ಬಂದಿ ಬಳಸುವ ವಾಹನಗಳಿಗೆ ಹೋಲುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜೊತೆಗೆ ವಾಹನದಿಂದ ಪತ್ರವೊಂದು ಸಹ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಧ್ಯ ಸ್ಥಳದಲ್ಲೇ ಪೊಲೀಸರು ಇದ್ದಿದ್ದು ತನಿಖೆಯನ್ನು ಮಾಡತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....