LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ -

ಹೊನ್ನಾಳಿ -

ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಯಲ್ಲಿ ನಡೆದಿದೆ ಹೌದು ಫೈನಾನ್ಸ್‌ ಕಂಪನಿಯವರ ಕಿರುಕುಳಕ್ಕೆ ರಾಜ್ಯದಲ್ಲಿ ಜನರು ಬೇಸತ್ತಿದ್ದು ಇದರ ನಡುವೆ ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಸರ್ಕಾರ ಎಚ್ಚರಿಕೆಯ ನಡುವೆ ದಾವಣಗೆರೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಫೈನಾನ್ಸ್‌ ಕಂಪನಿಯವರ ಕಿರುಕುಳ ತಾಳದೇ ಶಿಕ್ಷಕಿಯೊಬ್ಬರು ಕಾಣೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಹೊನ್ನಾಳಿಯ ಸರ್ಕಾರಿ ಶಾಲೆ ಶಿಕ್ಷಕಿ ಪುಷ್ಪ ಲತಾ (46) ಅವರು ಭಾನುವಾರ ರಾತ್ರಿಯಿಂದ ಕಾಣೆಯಾಗಿದ್ದರು ಸಧ್ಯ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇರುವ ಬಗ್ಗೆ ಕುಟುಂಬದವರು ವ್ಯಕ್ತಪಡಿಸಿದ್ದಾರೆ. ಹೊನ್ನಾಳಿ ಪಟ್ಟಣದ ರಾಘವೇಂದ್ರ ಮಠದ ಸಮೀಪ ತುಂಗಭದ್ರಾ ನದಿ ದಂಡೆಯ ಬಳಿ ಪುಷ್ಪಲತಾ ಅವರ ಚಪ್ಪಲಿ ದೊರೆತಿವೆ

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದರಿಂದ ಮೃತದೇಹ ಪತ್ತೆಗೆ ಅಗ್ನಿಶಾಮಕ ದಳ ಸಿಬ್ಬಂದಿ, ಮುಳುಗುತಜ್ಞರು, ಮೀನುಗಾರರ ನೆರವಿನೊಂದಿಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ ಹಾಗೂ ಅನುದಾನಿತ ಶಾಲೆಯ ಶಿಕ್ಷಕ ಹಾಲೇಶ್ ದಂಪತಿಯು ಮನೆ ಕಟ್ಟಲು ₹ 30ರಿಂದ ₹ 40 ಲಕ್ಷ ಸಾಲ ಮಾಡಿದ್ದರು. ಸಾಲ ಮರು ಪಾವತಿ ಮಾಡದ್ದರಿಂದ ಫೈನಾನ್ಸ್ ಕಂಪನಿ ಯವರು ದಂಪತಿಗೆ ನೋಟಿಸ್ ನೀಡಿದ್ದರು.

ಸಾಲ ಮರುಪಾವತಿ ಮಾಡುವಂತೆ ಮನೆಗೆ ತೆರಳಿದ್ದಾಗ ಹಲ್ಲೆ ನಡೆಸಿದ್ದರು ಎಂದು ಪುಷ್ಪಲತಾ ಹಾಗೂ ಹಾಲೇಶ್ ದಂಪತಿ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಗೆ ಫೈನಾನ್ಸ್ ಕಂಪನಿಯವರು ದೂರು ನೀಡಿದ್ದರು. ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ಬಳಿಕ ಫೈನಾನ್ಸ್ ಕಂಪನಿಯವರು ದೂರು ವಾಪಸ್ ಪಡೆದಿದ್ದರು.

ಮಿತಿಮೀರಿದ ಸಾಲದಿಂದಾಗಿ ತೀವ್ರ ನೊಂದಿದ್ದ ದಂಪತಿಯು ಮನೆ ಮಾರಾಟಕ್ಕೆ ಮುಂದಾಗಿದ್ದರು. ಸದ್ಯ ಕಾಣೆಯಾಗಿದ್ದಾರೆ ಎಂಬ ದೂರು ದಾಖಲಿಸಿಕೊಂಡಿ ರುವ ಬೆನ್ನಲ್ಲೇ ಈಗ ಮತ್ತೊಂದು ವಿಚಾರ ಬೆಳಕಿಗೆ ಬಂದಿದ್ದು ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.

ಸುದ್ದಿ ಸಂತೆ ನ್ಯೂಸ್ ಹೊನ್ನಾಳಿ ‌.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....