LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್‌ ಶಿಕ್ಷಕರ ವೇತನಕ್ಕಾಗಿ 560.24 ಕೋಟಿ ರೂ ಬಿಡುಗಡೆ.....

ಬೆಂಗಳೂರು -

ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ವೊಂದನ್ನು ರಾಜ್ಯ ಸರ್ಕಾರ ವು ನೀಡಿದ್ದು ಶಿಕ್ಷಕರ ವೇತನಕ್ಕಾಗಿ 560.24 ಕೋಟಿ ರೂ ಅನುದಾನ ವನ್ನು ಬಿಡುಗಡೆ ಮಾಡ ಲಾಗಿದೆ.2026-27ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾರ್ಯನಿರ್ವಹಿಸುತ್ತಿ ರುವ ಶಿಕ್ಷಕರು, ಅಧಿಕಾರಿ ಹಾಗೂ ಸಿಬ್ಬಂದಿಯ ವೇತನ ಪಾವತಿಗಾಗಿ ರಾಜ್ಯ ಸರ್ಕಾರ 560.24 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಮೂರನೇ ತ್ರೈಮಾಸಿಕ ಅವಧಿಯಾದ ಅಕ್ಟೋಬರ್‌ ನಿಂದ ಡಿಸೆಂಬರ್ 2026ರವರೆಗೆ ಮೂರು ತಿಂಗಳ ವೇತನ ಪಾವತಿಗೆ ಈ ಅನುದಾನವನ್ನು ಬಳಸಲಾ ಗುತ್ತದೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕುಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಸಿಬ್ಬಂದಿಯ ವೇತನ ವೆಚ್ಚಕ್ಕಾಗಿ ಈ ಅನುದಾನ ಬಿಡುಗಡೆ ಮಾಡಲಾಗಿದೆ.

ಸರ್ಕಾರದ ಅಕ್ಟೋಬರ್ 1, 2026ರ ಆದೇಶದಂತೆ 56,024.57 ಲಕ್ಷ, ಅಂದರೆ 560.2457 ಕೋಟಿ ರೂ. ಅನುದಾನವನ್ನು ಮೂರನೇ ತ್ರೈಮಾಸಿಕ ವೇತನ ಪಾವತಿಗೆ ಬಿಡುಗಡೆ ಮಾಡಲು ಅನುಮತಿ ನೀಡ ಲಾಗಿದೆ.2026-27ನೇ ಸಾಲಿನ ಆಯವ್ಯಯದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕದ ಶಿಕ್ಷಕರ ವೇತನಕ್ಕಾಗಿ ಒಟ್ಟು 2,264.007 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದ್ದು, ಅದರಲ್ಲಿ ಅಕ್ಟೋಬರ್-ಡಿಸೆಂಬರ್ ಅವಧಿಗೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.

ಬಿಡುಗಡೆಯಾದ ಅನುದಾನವನ್ನು ಜಿಲ್ಲಾವಾರು ಮತ್ತು ತಾಲೂಕುವಾರು ಹಂಚಿಕೆ ಮಾಡಿ, ಖಜಾನೆ ಯಲ್ಲಿ ಅಪ್‌ಲೋಡ್ ಮಾಡುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿದೆ. ಅರ್ಹ ಶಿಕ್ಷಕರು ಮತ್ತು ಸಿಬ್ಬಂದಿಗೆ ನಿಯಮಾನುಸಾರ ವೇತನ ಪಾವತಿಸುವ ಜವಾಬ್ದಾ ರಿಯನ್ನು ಸಂಬಂಧಿಸಿದ ಡಿಡಿಒಗಳಿಗೆ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....