LIVE TV LocalCrimeNationalInternationalPoliticsEducationTechnologyEntertainmentSportsFeature
International News

ರಾಜೀನಾಮೆ ಗೆ ನಾನು ಸಿದ್ದನಿದ್ದೇನಿ ಮಹಾ CM ಉದ್ಭವ ಠಾಕ್ರೆ - ನಮ್ಮದೇ ಪಕ್ಷದವರು ನಮಗೆ ತಿರುಗಿ ಬಿದ್ದಿದ್ದಾರೆಂದರು ಠಾಕ್ರೆ.....

ಹೊಸದಿಲ್ಲಿ -

ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರಕ್ಕೆ ಅಪಾಯ ತಂದೊ ಡ್ಡಿರುವ ಬಂಡಾಯದ ವಿರುದ್ಧ ಹೋರಾಡುತ್ತಿರುವ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಈಗಲೇ ರಾಜೀನಾಮೆ ನೀಡಲು ಸಿದ್ಧ ಮತ್ತು ಒಬ್ಬ ಶಾಸಕರು ವಿರೋಧಿಸಿದರೂ ನಾನು ಸ್ಥಾನ ತ್ಯಜಿಸುವುದಾಗಿ ಹೇಳಿ ದ್ದಾರೆ.ಸಾಮಾಜಿಕ ಜಾಲ ತಾಣ(ಫೇಸ್ ಬುಕ್) ಲೈವ್ ಮೂಲಕ ಮಾತನಾಡಿದ ಅವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು

ಭಾವನಾತ್ಮಕ ಭಾಷಣದಲ್ಲಿ ಮಾತನಾಡುತ್ತಾ ಉನ್ನತ ನಾಯಕರೊಬ್ಬರು ಸೋಮವಾರ ರಾತ್ರಿ 21 ಶಾಸಕರೊಂ ದಿಗೆ ಮುಂಬೈ ತೊರೆದ ನಂತರ ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ತಮ್ಮ ಪಕ್ಷದವರೇ ತಮ್ಮ ವಿರುದ್ಧ ತಿರುಗಿ ಬಿದ್ದಿದ್ದಕ್ಕಾಗಿ ನೋವಿಗೊಳಗಾಗಿದ್ದೇನೆ ಎಂದರು.ಇನ್ನೂ ಮಾತನಾಡುವ ಸಂದರ್ಭದಲ್ಲಿ ಅವರ ಧ್ವನಿ ಕಂಪಿಸುತ್ತಿದ್ದು ಇದು ಅವರು ಕೋವಿಡ್‌ ನಿಂದ ಬಳಲುತ್ತಿರುವುದರಿಂದ ಆಗಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ನಾನು ಈಗಲೇ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಲು ಸಿದ್ಧನಿದ್ದೇನೆ.ಸ್ಥಾನಗಳು ಬರುತ್ತವೆ ಮತ್ತು ಹೋಗುತ್ತವೆ ಆದರೆ ಮುಂದಿನ ಮುಖ್ಯಮಂತ್ರಿ ಶಿವಸೇನೆಯಿಂದಲೇ ಎಂದು ನೀವು ನನಗೆ ಭರವಸೆ ನೀಡಬಹುದೇ ಎಂದು ಉದ್ಧವ್ ಠಾಕ್ರೆ ಶಿವಸೇನೆ ಬಂಡುಕೋರರಿಗೆ ತೀಕ್ಷ್ಣವಾದ ಸಂದೇಶವನ್ನು ನೀಡಿದ್ದಾರೆ.

ಇನ್ನೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇ ಕೆಂದು ನೀವು ಬಂದು ನನ್ನ ಮುಖ ನೋಡಿ ಹೇಳಿ ನಾನು ಆ ಕೂಡಲೇ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸುತ್ತೇನೆ. ಮುಖ್ಯಮಂತ್ರಿ ಸ್ಥಾನವು ನನಗೆ ಆಕಸ್ಮಿಕವಾಗಿ ಬಂದಿತು. ಇದು ನನ್ನ ಹಂಬಲವಲ್ಲ ಎಂದು ಠಾಕ್ರೆ ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....