LIVE TV LocalCrimeNationalInternationalPoliticsEducationTechnologyEntertainmentSportsFeature
State News

IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನ - ವಿಚಾರಣೆ ನಂತರ ವಶಕ್ಕೆ ತೆಗೆದುಕೊಂಡ ಪೊಲೀಸರು.....

ಬೆಂಗಳೂರು -

KPSC ನೇಮಕಾತಿ ನಗರದಲ್ಲಿ ಕೆಲ ದಿನಗಳಿಂದ ನಾಪತ್ತೆ ಯಾಗಿದ್ದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ನ್ನು ಬಂಧನ ಮಾಡಲಾಗಿದೆ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನಿಖೆಗೆ ಸೂಕ್ತ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಅಂಕ ತಿದ್ದುಪಡಿ ಹಾಗೂ ನೇಮಕಾತಿಯಲ್ಲಿನ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತೀವ್ರ ತನಿಖೆ ನಡೆಸುತ್ತಿದೆ.

ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿ ಗಳು ನಿನ್ನೆ ಸತತ 11 ಗಂಟೆಗಳ ಕಾಲ ಗ್ಯಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು ಬಳಿಕ ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರಿಸಿದ ತನಿಖಾಧಿಕಾರಿಗಳು ನೀಡಿದ ಹೇಳಿಕೆಗಳಲ್ಲಿನ ಅಸಮಂಜಸತೆ ಹಾಗೂ ತನಿಖಾ ಪ್ರಕ್ರಿಯೆಗೆ ಸರಿಯಾಗಿ ಸ್ಪಂದಿಸದ ಕಾರಣ ಅಂತಿಮ ವಾಗಿ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಅಧಿಕಾರಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪ್ರಕರಣದ ಮತ್ತಷ್ಟು ಆಳವಾದ ಮಾಹಿತಿ ಹಾಗೂ ಇತರ ಪ್ರಭಾವಿಗಳ ಪಾತ್ರವನ್ನು ಬಯಲಿಗೆಳೆಯಲು ಹೆಚ್ಚಿನ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲು ಸಿಐಡಿ ಸಿದ್ಧತೆ ನಡೆಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....