LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮತ್ತೊಂದು ಬಜೆಟ್ ಸಿದ್ದರೆ ಆರಂಭ ಮಾಡಿದ CM - ಗ್ಯಾರಂಟಿ ಯೋಜನೆಗಳ ನಡುವೆ ಈ ಬಜೆಟ್ ನಲ್ಲಾದರೂ ರಾಜ್ಯದ ಸರ್ಕಾರಿ ನೌಕರರಿಗೆ ಸಿಗುತ್ತಾ ಬಂಪರ್.....ನಿರೀಕ್ಷೆಯಲ್ಲಿ ಸಮಸ್ತ ನೌಕರರು.....

ಬೆಂಗಳೂರು -

ಮತ್ತೊಂದು ಬಜೆಟ್ ಮಂಡನೆ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆಯನ್ನು ಮಾಡಿಕೊಳ್ಳ ಲಾರಂಭಿಸಿದ್ದಾರೆ.ಹೌದು ಫೆಬ್ರುವರಿ 16 ರಂದು ರಾಜ್ಯ ಬಜೆಟ್‌ ನ್ನು ಮಂಡನೆ ಮಾಡಲು ಸಿದ್ಧತೆ ಆರಂಭಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಗ್ಯಾರಂ ಟಿಗಳ ಭಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮತ್ತೊಂ  ದು ಜನಪ್ರಿಯ ಬಜೆಟ್‌ ನೀಡುತ್ತದೆಯೋ

ಅಥವಾ ವಿತ್ತೀಯ ಶಿಸ್ತಿನ ಅನಿವಾರ್ಯತೆ ಪ್ರದರ್ಶಿಸಲಿದೆಯೋ ಎಂಬ ಕುತೂಹಲಕ್ಕೆ ಫೆಬ್ರವರಿ 16ರಂದು ಎಲ್ಲಾ ಪ್ರಶ್ನೆ ಗಳಿಗೆ ಉತ್ತರ ಲಭಿಸುವ ನಿರೀಕ್ಷೆ ಇದೆ ಈಗಾಗಲೇ ಈ ಒಂದು ಕುರಿತು ಬಜೆಟ್‌ ಸಿದ್ಧತೆ ಪ್ರಾರಂಭಿಸಲಿದ್ದಾರೆ.ಫೆ. 12ರಿಂದ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಪ್ರಾರಂಭಗೊಳ್ಳಲಿದೆ.

ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಉಭಯ ಸದನವನ್ನುದ್ದೇಶಿಸಿ ಭಾಷಣ ಮಾಡ ಲಿದ್ದಾರೆ. ಬಳಿಕ ನಾಲ್ಕು ದಿನಗಳ ಕಾಲ ವಂದನಾ ನಿರ್ಣಯದ ಬಗ್ಗೆ ಚರ್ಚೆ ನಡೆಯಲಿದೆ ಫೆ.16 ಅಥವಾ 17ರಂದು ಸಿಎಂ ಸಿದ್ದರಾಮಯ್ಯನವರು ತಮ್ಮ 15ನೇ ಆಯವ್ಯಯವನ್ನು ಮಂಡಿಸಲಿ ದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗ ಳು ತಿಳಿಸಿವೆ.

ಫೆ.12 ರಿಂದ 23 ರವರೆಗೆ ಅಧಿವೇಶನ ನಡೆ ಯುತ್ತದೆ. ಗ್ಯಾರಂಟಿಗಳಿಗೆ ಈ ಬಾರಿಯ ಬಜೆಟ್‌ ನಲ್ಲಿ ಸುಮಾರು 75000 ಕೋಟಿ ರೂ. ವ್ಯಯವಾ ಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಹೀಗಾಗಿ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇನ್ನಷ್ಟು ಜನಪ್ರಿಯ ಯೋಜನೆಗಳನ್ನು ಘೋಷಿ ಸುವುದಕ್ಕೆ ಸಿದ್ದರಾಮಯ್ಯ ಅವರಿಗೆ ಕಷ್ಟವಾಗಬ ಹುದು ಎಂದು ಹೇಳಲಾಗುತ್ತಿದೆ.

ಕಳೆದ ಬಜೆಟ್‌ ನಲ್ಲಿ ಘೋಷಿಸಿದ ಹಲವು ಯೋಜನೆಗಳು ಆಡ ಳಿತಾತ್ಮಕ ಆದೇಶಕ್ಕೆ ಮಾತ್ರ ಸೀಮಿತವಾಗಿರುವು ದರಿಂದ ಸಿದ್ದರಾಮಯ್ಯನ ವರಿಗೆ ಈ ಬಾರಿಯ ಬಜೆಟ್‌ ಕೂಡಾ ಹಗ್ಗದ ಮೇಲಿನ ನಡಿಗೆಯಾಗಿ ಪರಿಣಮಿಸಿದೆ.2023-24ನೇ ಸಾಲಿನಲ್ಲಿ 2,50,933 ಕೋಟಿ ರೂ. ರಾಜಸ್ವ ವೆಚ್ಚ, 54,374 ಕೋಟಿ ರೂ. ಬಂಡವಾಳ ವೆಚ್ಚ,

22,441 ಕೋಟಿ ರೂ. ಸಾಲದ ಮರುಪಾವತಿ ಯೂ ಒಳಗೊಂಡಂತೆ 3,27,747 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಲಾಗಿತ್ತು. ಈ ಬಾರಿ ಬಜೆಟ್‌ ಗಾತ್ರ ಮೂರೂವರೆ ಲಕ್ಷ ಕೋಟಿ ರೂ.ಗೆ ತಲುಪಬಹುದು ಎಂದು ಅಂದಾಜಿಸಲಾಗುತ್ತಿದ್ದು ಏನೇನಾಗಲಿದೆ ಎಂಬೊಂದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....