LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಶಿಕ್ಷಕರ ಅಕ್ರಮ ನೇಮಕಾತಿ ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕಿ ಗೀತಾ ಸೇರಿ ಐವರ ಬಂಧನ – ಮುಂದುವರೆದ ಅಕ್ರಮದ ತನಿಖೆ

ಬೆಂಗಳೂರು -

ಶಿಕ್ಷಕರ ಅಕ್ರಮದ ನೇಮಕಾತಿಯ ತನಿಖೆ ಮುಂದುವರೆದಿದ್ದು 2014-15 ರ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಐವರನ್ನು ಬಂಧಿಸಿದ್ದಾರೆ ಹೌದು ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕಿ ಗೀತಾ ಪಠ್ಯ ಪುಸ್ತಕ ಸಮಿತಿ ನಿರ್ದೇಶಕ ಮಾದೇಗೌಡ,ನಿವೃ‍ತ್ತ ಜಂಟಿ ನಿರ್ದೇಶಕ ಜಿ.ಆರ್ ಬಸವರಾಜು,ನಿವೃತ್ತ ಜಂಟಿ ನಿರ್ದೇಶಕಿ ಕೆ.ರತ್ನಯ್ಯ ಅವರನ್ನು ಬಂಧನ ಮಾಡಲಾಗಿದೆ.

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ತನಿಖೆ ಚುರುಕಾಗಿದ್ದು ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಭಾಗಿಯಾದ ಒಬ್ಬೊಬ್ಬರನ್ನು ಬಲೆಗೆ ಬೀಳಿಸುತ್ತಿದ್ದಾರೆ ಬಂಧಿತ ಐವರು ಆರೋಪಿಗಳನ್ನು ಸಿಐಡಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಹಿನ್ನಲೆಯಲ್ಲಿ ನೀಡುವಂತೆ ಕೇಳಿಕೊಂಡ ಹಿನ್ನಲೆಯಲ್ಲಿ ನ್ಯಾಯಾಲಯ ಆರೋಪಿಗಳನ್ನು ಸಿಐಡಿ ಪೊಲೀಸರಿಗೆ ನೀಡಿದೆ.

ಈ ಸಂಬಂಧ ಬಂಧಿತ ಐವರು ಆರೋಪಿಗಳು ಅಕ್ಟೋಬರ್ 1 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದ್ದು ಹಣ ನೀಡಿ ಶಿಕ್ಷಕರ ಹುದ್ದೆ ಗಿಟ್ಟಿಸಿದ್ದ ಆರೋಪಿಗಳಿಗೆ ಮತ್ತೊಂದು ಕಾನೂನಿನ ಉರುಳು ಸುತ್ತಿಕೊಂಡಿದೆ.ಆರೋಪಿತ ಶಿಕ್ಷಕರು ಹಾಗೂ ಕಿಂಗ್ ಪಿನ್ ಕೆ ಎನ್ ಪ್ರಸಾದ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಸ್ತ್ರವನ್ನು ಸಿಐಡಿ ಪ್ರಯೋಗಿಸಿದೆ.

ಪ್ರಕರಣದ ತನಿಖೆ ಎದುರಿಸುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ಎಫ್ ಡಿ ಸಿ ಕೆ ಸಿ ಪ್ರಸಾದ್ ಸರ್ಕಾರಿ ನೌಕರನಾಗಿದ್ದಾನೆ.ಹಾಗೂ ಬಂಧಿತ 13 ಮಂದಿ ಆರೋಪಿಗಳು ಸರ್ಕಾರಿ ನೌಕರನಾಗಿದ್ದಾನೆ.ಬಂಧಿತ ಆರೋಪಿಗಳು ಎಫ್ ಡಿ ಸಿ ಪ್ರಸಾದ್ ಗೆ ಹಣ ನೀಡಿ ಹುದ್ದೆ ಪಡೆದಿರುವುದು ತನಿಖೆಯಿಂದ ಗೊತ್ತಾಗಿದೆ ಆದ್ದರಿಂದ ಭ್ರಷ್ಟಾಚಾರ ತಡೆ ಕಾಯಿದೆ ಅನ್ವಯವೂ ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಶಿಕ್ಷಕರ ಅಕ್ರಮ ನೇಮಕ ಪ್ರಕರಣದಲ್ಲಿ ತನಿಖೆ ಚುರುಕಾಗಿದ್ದು ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಭಾಗಿಯಾದ ಒಬ್ಬೊಬ್ಬರನ್ನೇ ಬಲೆಗೆ ಬೀಳಿಸು ತ್ತಿದ್ದು ಇದರೊಂದಿಗೆ ತನಿಖೆ ಚುರುಕುಗೊಂಡಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....