LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರ್ಗಾವಣೆ ವಿಚಾರದಲ್ಲಿ ಶಿಕ್ಷಕರಿಗೆ ಒಂದು ವಿಚಾರದಲ್ಲಾದರೂ ಗುಡ್ ನ್ಯೂಸ್ - 24 ರಂದು ಜಿಲ್ಲಾ ಕೇಂದ್ರ ದಲ್ಲಿ ಅನುಕೂಲ ಕಲ್ಪಿಸಿ ಆದೇಶ

ಬೆಂಗಳೂರು -

ವರ್ಗಾವಣೆಯ ವಿಚಾರದಲ್ಲಿ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ ಶಿಕ್ಷಣ ಇಲಾಖೆ.ಹೌದು ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು ಹಾಗೂ ತತ್ಸಮಾನ ಗ್ರೂಪ್-ಬಿ ವೃಂದದ ಅಂತರ ವಿಭಾಗದ ಕೋರಿಕೆ ವರ್ಗಾವಣೆ ದಿನಾಂಕ 24-12-2021ರಿಂದ ಆರಂಭಗೊಳ್ಳಲಿದೆ.ಈ ಒಂದು ವರ್ಗಾವಣೆಯ ಕೌನ್ಸಿಲಿಂಗ್ ಗಾಗಿ ಜಿಲ್ಲಾ ಕೇಂದ್ರಗಳ ಲ್ಲಿಯೇ ಕೌನ್ಸಿಲಿಂಗ್ ಗೆ ಹಾಜರಾಗಲು ಶಿಕ್ಷಕರಿಗೆ ಅವಕಾಶ ನೀಡಲಾಗಿದೆ.ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಯ ಜಂಟಿ ನಿರ್ದೇಶಕರು ಮಾಹಿತಿ ನೀಡಿ ಅದೇಶ ಮಾಡಿದ್ದಾರೆ

ಡಿಸೆಂಬರ್ 24-12-2021ರಿಂದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ಗ್ರೂಪ್-ಬಿ ವೃಂದದ ಅಂತರ ವಿಭಾಗದ ಕೋರಿಕೆ ವರ್ಗಾವಣೆಗೆ ಕೌನ್ಸಿಲಿಂಗ್ ಆರಂಭಗೊಳ್ಳಲಾಗುತ್ತಿದೆ.ಕೌನ್ಸಿಲಿಂಗ್ ಕೇಂದ್ರೀಕೃತ ಮಾದರಿಯಲ್ಲಿ ಒಂದೇ ಸ್ಥಳದಲ್ಲಿ ಹಮ್ಮಿಕೊಳ್ಳುವ ಬದಲಿಗೆ ಆಯಾ ಜಿಲ್ಲೆಗೆ ಸಂಬಂಧಪಟ್ಟ ಅಭ್ಯರ್ಥಿಗಳು ಅದೇ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಹಾಜರಾಗಲು ಅನುವು ಮಾಡಿಕೊಡಲಾಗಿದೆ.

ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳು ಆಯಾ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಯಲ್ಲಿಯೇ ಕೌನ್ಸಿಲಿಂಗ್ ಪ್ರಕ್ರಿಯೆ ಯಲ್ಲಿ ಹಾಜರಾಗಿ ಜೂಮ್ ಮೀಟ್ ಮಾದರಿಯಲ್ಲಿ ಪಾಲ್ಗೊಂಡು ವಿಭಾಗದ ಯಾವುದೇ ಖಾಲಿ ಹುದ್ದೆಯನ್ನು ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಬಹುದು.ಈ ಒಂದು ನಿಟ್ಟಿನಲ್ಲಿ ಉಪ ನಿರ್ದೇಶಕರು ಸಮರ್ಪಕವಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....