LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸೆಕ್ಸ್ ಸಿಡಿ ಪ್ರಕರಣದ ತನಿಖೆಯ ಅಧಿಕಾರಿಗಳ ತಂಡದ ಮಾಹಿತಿ

ಬೆಂಗಳೂರು -

ಬೆಳಗಾವಿ ಸಾಹುಕಾರ್ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣವನ್ನು ಈಗಾಗಲೇ SIT ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದು ಅಧಿಕಾರಿ ಮಗಳು ತನಿಖೆಯನ್ನು ಮಾಡುತ್ತಿದ್ದಾರೆ.ಇನ್ನೂ ಈ ಒಂದು ಪ್ರಕರಣದ ತನಿಖೆಯನ್ನು ಆರಂಭ ಮಾಡಿರುವ ಅಧಿಕಾರಿಗಳು ಈಗಾಗಲೇ ಐದು ಜನರನ್ನು ವಶಕ್ಕೆ ತಗೆದುಕೊಂಡು ವಿಚಾರಣೆ ಮಾಡತಾ ಇದ್ದಾರೆ. ಇವೆಲ್ಲದರ ನಡುವೆ ಪ್ರಕರಣದ ತನಿಖೆ ನಡೆಸಲು ಖಡಕ್ ಅಧಿಕಾರಿಗಳನ್ನು ಹೊಂದಿರುವ ತಂಡವನ್ನು ರಚನೆಯಾಗಿದೆ.ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರ ಮಾರ್ಗದರ್ಶನದಲ್ಲಿ ಸಿಡಿ ಪ್ರಕರಣದ ತನಿಖೆ ನಡೆಸಲಿದ್ದಾರೆ.ಇನ್ನೂ ಕೇವಲ ತನಿಖೆ ನಡೆಸಿ ವರದಿ ಸಲ್ಲಿಸುವ ವಿಚಾರವಾಗಿ ಈ ತಂಡವನ್ನು ರಚನೆ ಮಾಡಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಆದೇಶದ ಹಿನ್ನೆಲೆಯಲ್ಲಿ ಇದೀಗ ಪೂರ್ಣ ಪ್ರಮಾಣದ ವಿಶೇಷ ತನಿಖಾ ತಂಡ ರಚನೆಯಾಗಿದೆ.

ಐಜಿಪಿ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸಿಸಿಬಿ ಡಿಸಿಪಿ ಕೆ.ಪಿ. ರವಿಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಸಿಸಿಬಿ ಎಸಿಬಿ ಧರ್ಮೇಂದ್ರ, ಸಿಸಿಬಿ ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಾರುತಿ ಈ ತಂಡದಲ್ಲಿ ಇದ್ದಾರೆ.ಇನ್ನು ಸದ್ಯದ ಮಟ್ಟಿಗೆ ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಷ್ಟೇ ಈ ವಿಶೇಷ ತನಿಖಾ ತಂಡ ಸೀಮಿತವಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....