LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕಿಯಿಂದ ಅಮಾನವೀಯ ಕೃತ್ಯ.....ಕ್ರಮಕ್ಕೆ ಪೋಷಕರ ಒತ್ತಾಯ.....

ಶಿವಮೊಗ್ಗ -

ಶಿಕ್ಷಕಿಯಿಂದ ಅಮಾನವೀಯ ಕೃತ್ಯ ಸಾಗರದಲ್ಲಿ ರಕ್ತ ಬರುವಂತೆ ವಿದ್ಯಾರ್ಥಿಗಳಿಗೆ ಥಳಿಸಿದ ಅತಿಥಿ ಶಿಕ್ಷಕಿ ಹೌದು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂಬ ಕಾರಣಕ್ಕೆ ಪ್ರಾಥಮಿಕ ಶಾಲೆಯ ಪುಟ್ಟ ಮಕ್ಕಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ರಕ್ತ ಬರುವಂತೆ ಮನಬಂದಂತೆ ಥಳಿಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ.

ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ರಕ್ಷಿತಾ ಎಂಬ ಅತಿಥಿ ಶಿಕ್ಷಕಿ ಮಕ್ಕಳ ಮೇಲೆ ಈ ಕ್ರೌರ್ಯ ಮೆರೆದಿದ್ದಾರೆ.ರಕ್ತ ಬರುವಂತೆ ಮನಸೋಇಚ್ಛೆ ಹಲ್ಲೆ

ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎರಡು, ಮೂರು ಮತ್ತು ನಾಲ್ಕನೇ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷಕಿ ಕೋಲಿನಿಂದ ಅಮಾನವೀ ಯವಾಗಿ ಹೊಡೆದಿದ್ದಾರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡ ಶಿಕ್ಷಕಿ, ಮಕ್ಕಳ ಬೆನ್ನಿನ ಮೇಲೆ ಬಾಸುಂಡೆ ಎದ್ದು ರಕ್ತ ಬರುವ ಮಟ್ಟಿಗೆ ಥಳಿಸಿದ್ದಾರೆ.

ಮನೆಗೆ ತೆರಳಿದ ಮಕ್ಕಳ ಬೆನ್ನಿನ ಮೇಲಿನ ಗಾಯ ಗಳನ್ನು ಕಂಡು ಪೋಷಕರು ಬೆಚ್ಚಿಬಿದ್ದಿದ್ದಾರೆ.
ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹವನ್ನು ಪೋಷಕರು ಮಾಡಿದ್ದು ವಿದ್ಯಾರ್ಥಿಗಳಿಗೆ ಅಕ್ಷರ ಕಲಿಸಬೇಕಾದ ಶಿಕ್ಷಕಿಯೇ ಈ ರೀತಿ ರಾಕ್ಷಸೀ ಪ್ರವೃತ್ತಿ ಪ್ರದರ್ಶಿಸಿರು ವುದಕ್ಕೆ ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಅತಿಥಿ ಶಿಕ್ಷಕಿ ರಕ್ಷಿತಾ ವಿರುದ್ಧ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಶಿಸ್ತುಕ್ರಮ ಜರುಗಿಸಬೇಕು ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....