LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸಕಾಲ ಯೋಜನೆಯಡಿ ಅರ್ಜಿಗಳ ಅಹ್ವಾನ

ಹುಬ್ಬಳ್ಳಿ -

ಕರ್ನಾಟಕ ಸರ್ಕಾರದ ಆದೇಶದನ್ವಯ ದಿನಾಂಕ 30/11/2020 ರಿಂದ 05/12/2020 ರ ವರೆಗೆ ಸಾರ್ವಜನಿಕ ಹಿತಾಶಕ್ತಿ ಹಿನ್ನಲೆಯಲ್ಲಿ ಕೈಗೊಳ್ಳಲಾಗುತ್ತಿರುವ “ಸಕಾಲ ಸಪ್ತಾಹ” ಕಾರ್ಯವನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲದಾರ ಶಶಿಧರ ಮಾಡ್ಯಾಳ ಹೇಳಿದರು.ಮಿನಿ ವಿಧಾನಸೌಧದಲ್ಲಿ ಆಯೋಜಿಸಲಾದ “ಸಕಾಲ ಸಪ್ತಾಹ” ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ಸಕಾಲ ಯೋಜನೆಯಡಿಯಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಿ, ಉಪಯುಕ್ತ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದರು. ಈ ಯೋಜನೆಯು ಜನ ಸಾಮಾನ್ಯರಿಗೆ ತಲುಪುವ ಮಟ್ಟಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದಂರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲದಾರರಾದ ಪ್ರಕಾಶ ನಾಶಿ ಅವರು 2011 ರಲ್ಲಿ ಪ್ರಾರಂಭಗೊಂಡ “ಸಕಾಲ ಯೋಜನೆ” ರೈತಾಪಿ ವರ್ಗ ಸೇರಿದಂತೆ ಎಲ್ಲರಿಗೂ ತಮ್ಮ ನಿಗದಿತ ಸಮಯಕ್ಕೆ ಮಾಹಿತಿಯನ್ನು ಪಡೆಯಬಹುದಾಗಿದ್ದು ತಾವು ಸಲ್ಲಿಸುವ ಅರ್ಜಿಯು ಗುಣಾತ್ಮಕವನ್ನು ಹೊಂದಿರತಕ್ಕದ್ದು ಹಾಗೆಯೇ ಮಾಹಿತಿಯು ಸ್ಪಷ್ಟವಾಗಿರಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಹರ ಠಾಣೆ ಇನ್ಸ್ಪೆಕ್ಟರ್ ಎಮ್ ಎಸ್ ಪಾಟೀಲ್, ತಾ.ಪಂ.ಕಾರ್ಯನಿರ್ವಣಾಧಿಕಾರಿ ಗಂಗಾಧರ ಕಂದಕೂರ, ಉಪ ತಹಶೀಲದಾರ ವಿಜಯ್ ಕಡಕೋಳ, ವಾರ್ತಾ ಇಲಾಖೆಯ ಅಧಿಕ್ಷಕ ವಿನೋದ ಕುಮಾರ.ಡಿ , ಶಿರೆಸ್ತೆದಾರ ಎ.ಜಿ.ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....