LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕುಡಿಯುವ ನೀರಿನ ಪೈಪ್ ಲೈನ್ - ಕಾಮಗಾರಿಗೆ ಜಗದೀಶ್ ಶೆಟ್ಟರ್ ಭೂಮಿ ಪೂಜೆ

ಹುಬ್ಬಳ್ಳಿ -

24 ಲಕ್ಷ ವೆಚ್ಚದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಯಿತು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜಾ ಕಾಮಾಗಾರಿಗೆ ಚಾಲನೆ ನೀಡಿದರು. ನಗರದ ವಾರ್ಡ್ ನಂಬರ್ 35 ರ ಶ್ರೀ ಶಾಕ್ತ ಪೀಠ ನಗರ, ಗಣೇಶ ಕಾಲೋನಿ, ಧನ್ವಂತರಿ ಕಾಲೋನಿ, ಆಶ್ರಯ ಕಾಲೋನಿ , ಮಹಾಲಕ್ಷ್ಮಿ ಬಡಾವಣೆ, ಶಟ್ಟನ ಗೌಡ್ರ ಕಾಲೋನಿ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಿಗೆ 24 ಲಕ್ಷ ವೆಚ್ಚದ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಕಾಮಗಾರಿಗೆ ಬೃಹತ್ ಮತ್ತು‌ ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು.

ಶಾಕ್ತ ಪೀಠ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಅವಳಿ ನಗರದಲ್ಲಿ 24*7 ನಿರಂತರ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಉಣಕಲ್ ಕೆರೆಯ ಹಿಂಬಾಗದ ಅನಧಿಕೃತವಾದ ಬಡಾವಣೆಗಳ ನಿವಾಸಿಗಳು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುಂತೆ ಹಲವು ಬಾರಿ ಮನವಿ ಮಾಡಿದ್ದರು.

ಇದರ ಅನ್ವಯ ಕುಡಿಯುವ ನೀರು ಸರಬರಾಜು ಮಂಡಳಿಯಿಂದ 24 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದರು. ಇನ್ನೂ 1 ಕಿ.ಮೀ ಮುಖ್ಯ ಪೈಪ್ ಲೈನ್ ಹಾಗೂ 400 ಮೀಟರ್ ಒಳ ಪೈಪ್ ಲೈನ್ ಗಳನ್ನು ಹೊಸದಾಗಿ ಹಾಕಲಾಗುತ್ತಿದೆ. ಅನಧಿಕೃತ ಬಡವಾಣೆಗಳನ್ನು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಉಣಕಲ್ ಹುಲಿಕೊಪ್ಪ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಅಡಿ ತರಲಾಗಿದೆ. ಶೀಘ್ರವಾಗಿ ರಸ್ತೆ ಅಗಲೀಕರಣದೊಂದಿಗೆ ಮೇಲ್ದರ್ಜೆಗೆ ಏರಿಸಲಾಗುವುದು.

ಉಣಕಲ್ ಕೆರೆಯ ಸುತ್ತ ಮುತ್ತ ಅನಧಿಕೃತ ಬಡಾವಣೆಗಳನ್ನು ನಿರ್ಮಿಸುವದನ್ನು ನಿಲ್ಲಿಸಬೇಕು. ಇದರಿಂದಾಗಿ ಕೆರೆ ಪರಿಸರ ಹಾಳಾಗುವುದು ಎಂದು ಶೆಟ್ಟರ್ ಹೇಳಿದರು. ಇನ್ನೂ ಉಣಕಲ್ ಕೆರೆ ಉಳಿಸಲು ಎಲ್ಲರೂ ಪ್ರಯತ್ನಿಸಬೇಕು. ಸ್ಮಾರ್ಟ್ ಸಿಟಿ ಅಡಿಯಲ್ಲಿ ಉಣಕಲ್ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ‌ಪಡಿಸಲಾಗುತ್ತಿದೆ ಎಂದು‌ ಹೇಳಿದರು.ಈ ಒಂದು ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಮಹೇಶ್ ಬುರಲಿ, ತಿಪ್ಪಣ್ಣ ಮಜ್ಜಿಗೆ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ್, ಸಂತೋಷ್ ಚೌವ್ಹಾಣ್ ಸೇರಿದಂತೆ ಪಕ್ಷದ ಹಲವು ನಾಯಕರು ಮುಖಂಡರು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....