LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ ಪ್ರಗತಿ ಪರಿಶೀಲನಾ ಸಭೆ

ಹುಬ್ಬಳ್ಳಿ - ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಹುಬ್ಬಳ್ಳಿಯಲ್ಲಿ ನಡೆಯಿತು‌. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಶಾಸಕರಾದ ಶಂಕರ ಬ.ಪಾಟೀಲ ಮುನೇನಕೊಪ್ಪ ಇವರು ಈ ಒಂದು ಸಭೆಯನ್ನು ಆಯೋಜಿಸಿದ್ದರು.ಇವರೊಂದಿಗೆ ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ ಇವರುಗಳ ನೇತ್ರತ್ವದಲ್ಲಿ ಈ ಒಂದು ಸಭೆ ನಡೆಯಿತು.

ಸಭೆಯಲ್ಲಿ 1206.97 ಕೋಟಿ ರೂಪಾಯಿ ವೆಚ್ಚದ ಕರ್ನಾಟಕ ರಾಜ್ಯದ ಹುಬ್ಬಳ್ಳಿ-ಧಾರವಾಡ ನಗರಕ್ಕೆ ನಿರಂತರ 24X7 ಒತ್ತಡ ಸಹಿತ ನೀರು ಸರಬರಾಜು ವ್ಯವಸ್ಥೆಯ ಪರಿಣಾಮಕಾರಿ ವೆಚ್ಚ ಮತ್ತು ಸುಸ್ಥಿರ ಉನ್ನತೀಕರಣಕ್ಕಾಗಿ ವಿನ್ಯಾಸ, ನಿರ್ಮಾಣ ಕಾರ್ಯಾಚರಣೆ ಮತ್ತು ನಿರ್ವಹಣೆ ಹಾಗೂ ವ್ಯವಸ್ಥೆಯ ವರ್ಗಾವಣೆ ಯೋಜನೆ ಕುರಿತು ವಿವರವಾಗಿ ಚರ್ಚಿಸಿ, ಸಮಾಲೋಚನೆ ನಡೆಸಿ, ಅಧಿಕಾರಿಗಳಿಂದ ವಿವರ ಪಡೆಯಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ಕೂಡ ನೀಡಲಾಯಿತು.

ಈ ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ,ಶಾಸಕರಾದ ಅರವಿಂದ್ ಬೆಲ್ಲದ , ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಪಾಲಿಕೆ ಆಯುಕ್ತರಾದ ಸುರೇಶ್ ಇಟ್ನಾಳ್ ಹಾಗೂ ಇನ್ನಿತರ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....