LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಎರಡು ಕಡೆಗಳಲ್ಲಿ ಚಾಕು ಇರಿತ – ಶ್ಯಾಮ್ ಮತ್ತು ಅರ್ಬಾಜ್ ಗೆ ಚಾಕು ಇರಿತ ಕಿಮ್ಸ್ ಗೆ ದಾಖಲು.....

ಹುಬ್ಬಳ್ಳಿ -

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ಕಡೆಗಳಲ್ಲಿ ಚಾಕು ಇರಿತವಾಗಿದೆ.ಹೌದು ಹಣಕಾಸು ವಿಚಾರ ಮತ್ತು ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ನಗರದ ಎರಡು ಕಡೆಗಳಲ್ಲಿ ಪ್ರತ್ಯೇಕ ವಾಗಿ ಚೂರಿ ಇರಿತ ಪ್ರಕರಣಗಳು ನಡೆದಿವೆ.ಹುಬ್ಬಳ್ಳಿಯ ಶ್ರೀನಗರ ಮತ್ತು ಇಬ್ರಾಹೀಂ ಪುರದಲ್ಲಿ ಈ ಒಂದು ಘಟನೆ ಗಳು ನಡೆದಿವೆ.ಹೆಗ್ಗೇರಿಯ ಸಲ್ಮೂನ ಶ್ಯಾಮ ಕಬಾಡೆ ಚಾಕು ಇರಿತಕ್ಕೀಡಾದವನಾಗಿದ್ದು ಅನೀಲ ಅಂಬರೀಶ ನಾಯಕ ಚಾಕುವಿನಿಂದ ಇರಿದ ಆರೋಪಿಯಾಗಿದ್ದು 50 ಸಾವಿರ ರೂಪಾಯಿ ಹಣಕಾಸಿನ ವಿಚಾರವಾಗಿ ಅನೀಲ ಜಗಳ ತೆಗೆದಿದ್ದ.ಬಳಿಕ ಎಡಗೈಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಸಧ್ಯ ಗಾಯಾಳುನನ್ನುಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇನ್ನೂ ಸುದ್ದಿ ತಿಳಿದ ಹಳೇ ಹುಬ್ಬಳ್ಳಿ ಪೊಲೀಸ್ ರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಮ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.ಇನ್ನೂ ಮತ್ತೊಂ ದೆಡೆ ಬ್ಲೇಡ್ನಿಂದ ಕುತ್ತಿಗೆಗೆ ಇರಿತವಾದ ಘಟನೆ ನಗರದಲ್ಲಿ ಮತ್ತೊಂದು ಕಡೆಗೆ ನಡೆದಿದೆ.ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.ಹಳೇ ಹುಬ್ಬಳ್ಳಿಯ ಅರ್ಬಾಜ್ ಫಾಜಿಲ್ ಅತ್ತಾರ ಗಾಯಗೊಂಡ ವನಾಗಿದ್ದು ವ್ಯಕ್ತಿಯೊಬ್ಬ ಅರ್ಬಾಜ್ ಜೊತೆ ಯಾವುದೋ ವಿಚಾರಕ್ಕೆ ಜಗಳ ತೆಗೆದಿದ್ದ.ಜಗಳ ವಿಕೋಪಕ್ಕೆ ತಿರುಗಿದಾಗ ಅರ್ಬಾಜ್ ಕುತ್ತಿಗೆಗೆ ಬ್ಲೇಡ್ ನಿಂಡ ಇರಿದಿದ್ದಾನೆ ವ್ಯಕ್ತಿ. ಸ್ಥಳಕ್ಕೆ ಕಸಬಾಪೇಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.ಗಾಯಾಳು ಇಬ್ಬರನ್ನು ಸಧ್ಯ ಕಿಮ್ಸ್ಗೆ ದಾಖಲು ಮಾಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....