LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಿನಯ ಕುಲಕರ್ಣಿ ಮನೆಗೆ ಲಕ್ಷ್ಮೀ ಹೆಬ್ಬಾಳಕರ ಭೇಟಿ

ವಿನಯ ಬಂಧನ ರಾಜಕೀಯ ಪ್ರೇರತವೆಂದ ಲಕ್ಷ್ಮೀ ಹೆಬ್ಬಾಳಕರ

ಧಾರವಾಡ -

ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನಿವಾಸಕ್ಕೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಭೇಟಿ ನೀಡಿದರು. ಧಾರವಾಡದ ಬಾರಾಕೊಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನಿವಾಸಕ್ಕೇ ಆಪ್ತರೊಂದಿಗೆ ತೆರಳಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕುಟುಂಬಸ್ಥರಿಗೆ ಧೈರ್ಯ ಹೇಳಿದರು.

ಅರ್ಧ ಘಂಟೆಗೂ ಹೆಚ್ಚು ಕಾಲ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಮತ್ತ ಮಕ್ಕಳೊಂದಿಗೆ ಕುಳಿತುಕೊಂಡು ಮಾತನಾಡಿದರು. ಅಲ್ಲದೇ ನಿಮ್ಮೊಂದಿಗೆ ಪಕ್ಷ ಇದೆ ನಾವು ಇದ್ದೇವಿ ಇವತ್ತು ಇಲ್ಲವೇ ನಾಳೆ ಗೆದ್ದೆ ಗೆದ್ದು ಬರುತ್ತಾರೆ ಎಂಬ ದೈರ್ಯವನ್ನು ತುಂಬಿದರು. ಇನ್ನೂ ಇದೇ ವೇಳೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿನಯ್ ಅವರು ಈ ಪ್ರಕರಣದಲ್ಲಿ ಗೆದ್ದು ಬರುತ್ತಾರೆ. ಅವರೊಂದಿಗೆ ಸಿದ್ದರಾಮಯ್ಯನವರಾದಿಯಾಗಿ ಇಡೀ ಕಾಂಗ್ರೆಸ್ ಪಕ್ಷದ ಕಟ್ಟಕಡೆಯ ಕಾರ್ಯಕರ್ತರು ಕೂಡ ಇದ್ದಾನೆ. ಇದು ಬಿಜೆಪಿಯ ತಂತ್ರ. ಬಿಜೆಪಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.

ಬಿಜೆಪಿಯವರ ಕೈಯಲ್ಲಿ ಅಧಿಕಾರ ಇದೆ. ಆ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸತ್ಯ ಮೇವ ಜಯತೇ ಸತ್ಯ ಯಾವಾಗಲೂ ಜಯಶಾಲಿಯಾಗುತ್ತದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.ಇವರೊಂದಿಗೆ ಸ್ಥಳೀಯ ಹಲವು ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....