LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಳೆ ಪಿಂಚಣಿ ಯೋಜನೆ ಗೆ ಕಾನೂನಾತ್ಮಕ ಸಂವಿಧಾನಾತ್ಮಕ ತೊಡಕು.....ಮಾಹಿತಿ ನೀಡಿದ ಗೃಹ ಸಚಿವರು.....

ಬೆಂಗಳೂರು -

ಹಳೇ ಪಿಂಚಣಿ ಜಾರಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ ಹೌದು ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸಂಬಂಧಿ ಸಿದಂತೆ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ತೊಡಕುಗಳಿದ್ದು ಅವುಗಳನ್ನು ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅವರ ಮನವಿ ಸ್ವೀಕರಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಲಾಗಿದೆ

ಮುಂದಿನ ದಿನಗಳಲ್ಲಿಯೂ ಒಪಿಎಸ್ ಜಾರಿಗೆ ಅಗತ್ಯ ಪ್ರಯತ್ನಗಳನ್ನು ಮುಂದುವರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಪರವಾಗಿ ಕಲಬುರಗಿ ಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆ ಯಲ್ಲಿ ಭಾಗವಹಿಸಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು

ಕಲಬುರಗಿ ಮಹಾನಗರದಲ್ಲಿ ಶಿಕ್ಷಕರ ಸಮುದಾ ಯದ ಬೇಡಿಕೆಯಂತೆ ಸುಮಾರು 23 ಸಾವಿರ ಚದರ ಅಡಿ ವಿಸ್ತೀರ್ಣದ, ₹2.34 ಕೋಟಿ ಮೌಲ್ಯದ ಜಾಗ ವನ್ನು ಸಿಎ ನಿವೇಶನವಾಗಿ ಒದಗಿಸಲಾಗಿದೆ. ಈ ಜಾಗದಲ್ಲಿ ಶಿಕ್ಷಕರ ಸಮುದಾಯಕ್ಕೆ ಅನುಕೂಲವಾ ಗುವ ರೀತಿಯಲ್ಲಿ ಅಗತ್ಯ ಸೌಲಭ್ಯಗಳನ್ನು ರೂಪಿಸಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಸರ್ಕಾರದ ಆಸ್ತಿ ಗಳು ಸಾರ್ವಜನಿಕರ ಆಸ್ತಿಯಾಗಿದ್ದು, ಅಧಿಕಾರದಲ್ಲಿ ರುವ ವ್ಯಕ್ತಿಗಳು ಬದಲಾಗಬಹುದು ಆದರೆ, ಸಾರ್ವ ಜನಿಕ ಆಸ್ತಿಯನ್ನು ಸಮುದಾಯಗಳ ಅಭಿವೃದ್ಧಿಗೆ ಬಳಸುವುದು ಮುಖ್ಯ. ಶಿಕ್ಷಕರ ಆಶೀರ್ವಾದ ಮತ್ತು ಬೆಂಬಲವಿದ್ದರೆ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದೆ ಎಂದಿದ್ದಾರೆ.

ಶಿಕ್ಷಕರು ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಉತ್ತಮ ಮನೋಭಾವನೆ, ಪ್ರಗತಿ ಪರ ಚಿಂತನೆ ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುತ್ತಾರೆ. ಶಿಕ್ಷಕರಲ್ಲಿ ಪ್ರಬುದ್ಧತೆ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಹೀಗಾಗಿ, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು

ಶಿಕ್ಷಕರು ಉತ್ತಮ ಹಾಗೂ ಪ್ರಬುದ್ಧ ಸಮಾಜ ನಿರ್ಮಾಣ ಮಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ನಮ್ಮದು ಆಳುವ ಸರ್ಕಾರವಲ್ಲ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸರ್ಕಾರ ಎಂದರು

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....