LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬೆಳ್ಳಂ ಬೆಳಿಗ್ಗೆ ಸರ್ಕಾರಿ ಅಧಿಕಾರಿ ಮನೆಯ ಮೇಲೆ ಲೋಕಾಯುಕ್ತರ ದಾಳಿ.....ಬೆಚ್ಚಿಬಿದ್ದ ಲೋಕಾ ಟೀಮ್.....

ಬೆಳಗಾವಿ -

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತ ಸಂಸ್ಥೆ ತನ್ನ ಕಾರ್ಯಾಚರಣೆಯನ್ನುಮುಂದುವರಿಸಿದ್ದು ಬೆಳಗ್ಗೆಯೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಹಶೀಲ್ದಾರ್‌ಗೆ  ಸಂಬಂಧಿಸಿದ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಈ ಪರಿಶೀಲನಾ ಕಾರ್ಯಾಚರಣೆ ನಡೆದಿದೆ

ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ ಆಸ್ತಿ-ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಿದ್ದಾರೆ. LanguageResources
ಇದೇ ವೇಳೆ, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ತಹಶೀಲ್ದಾರ್ ಸುರೇಶ್ ಮುಂಜೆ ಅವರ ಪತ್ನಿ ಅವರ ತವರು ಮನೆ ಹಾಗೂ ಅವರ ತಂದೆಯವರ ನಿವಾಸದ ಮೇಲೂ ಅಧಿಕಾರಿಗಳ ತಂಡ ಭೇಟಿ ನೀಡಿ ದಾಖಲೆ ಗಳನ್ನು ಪರಿಶೀಲಿಸಿದೆ.

ಪತ್ನಿ ತಂದೆಯವರ ನಿಕಟ ಸಂಬಂಧ ಹೊಂದಿರುವ ಸೊಸೈಟಿಯಲ್ಲಿಯೂ ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಸೊಸೈಟಿಯ ಹಣಕಾಸಿನ ವ್ಯವಹಾರಗಳು, ಆಸ್ತಿ ವಿವರಗಳು ಹಾಗೂ ಪ್ರಮುಖ ದಾಖಲೆಪತ್ರಗಳನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ.ಮನೆ ಹಾಗೂ ಸೊಸೈಟಿಯಲ್ಲಿರುವ ವಿವಿಧ ದಾಖಲೆಗಳು ಮತ್ತು ಆಸ್ತಿ-ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಈ ಕಾರ್ಯಾಚರಣೆ ವೇಳೆ ಯಾವುದೇ ಮಹತ್ವದ ದಾಖಲೆಗಳು ಅಥವಾ ಆಸ್ತಿಪಾಸ್ತಿಗಳ ಕುರಿತು ಅಧಿಕೃತವಾಗಿ ಏನು ಪತ್ತೆಯಾಗಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.ನಿಪ್ಪಾಣಿ ತಹಶೀಲ್ದಾರ್ ಮನೆ, ಕಚೇರಿಯಲ್ಲಿ ಲೋಕಾಯುಕ್ತ ದಾಳಿ :
ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ

.ನಿಪ್ಪಾಣಿ, ಅಥಣಿ ಹಾಗೂ ಮೂಡಲಗಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ಪರಿಶೀಲನಾ ಕಾರ್ಯ ನಡೆಸಲಾಗಿದೆ. ಅಧಿಕಾರಿಗಳು ತಹಶೀಲ್ದಾರ್ ಸುರೇಶ್ ಮುಂಜೆ ಅವರಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಇತರ ಸ್ಥಳಗಳಲ್ಲಿ ಆಸ್ತಿ ಮತ್ತು ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಆಸ್ತಿಗಳ ಮೂಲ, ಹಣಕಾಸಿನ ವ್ಯವಹಾರಗಳು ಹಾಗೂ ಲಭ್ಯವಿರುವ ದಾಖಲೆಗಳ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎನ್ನಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....