LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮನೆಗಳನ್ನು ಹಸ್ತಾಂತರ ಮಾಡಿದ ಶಾಸಕ ಮಹೇಶ್ ಟೆಂಗಿನಕಾಯಿ - ಕೊಟ್ಟ ಮಾತಿನಂತೆ ನಡೆದುಕೊಂಡ ಶಾಸಕರು.....ಆಯುಕ್ತ ಡಾ ರುದ್ರೇಶ ಘಾಳಿ ಉಪಸ್ಥಿತಿ.....

ಹುಬ್ಬಳ್ಳಿ -

ಹುಬ್ಬಳ್ಳಿಯಲ್ಲಿ  ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ಮಿಸಿರುವ ವಸತಿ‌ ಸಮುಚ್ಚಯದಲ್ಲಿ ಹೊಸೂರಿನ‌ ವೀರ ಮಾರುತಿ ನಗರದ ಕೊಳೆಗೇರಿ ನಿವಾಸಿಗಳಿಗೆ ಮನೆಗಳನ್ನು‌ ಚೀಟಿ ಎತ್ತುವ ಮೂಲಕ ಹಂಚಿಕೆ ಮಾಡಲಾಯಿತು.ನಾಲ್ಕು ಬ್ಲಾಕ್‌ಗಳಲ್ಲಿ ಒಟ್ಟು 80 ಮನೆಗಳನ್ನು ನಿರ್ಮಿಸಲಾಗಿದೆ. ವಾಣಿವಿಲಾಸ ವೃತ್ತದಿಂದ ಬಿಆರ್‌ಟಿಎಸ್ ಡಿಪೊವರೆಗೆ ರಸ್ತೆ ವಿಸ್ತರಣೆ ಕಾಮಗಾರಿಯಲ್ಲಿ ಮನೆ ಕಳೆದುಕೊಳ್ಳುವವರಿಗೆ ಮೊದಲ ಹಂತದಲ್ಲಿ ಮನೆಗಳನ್ನು  ಶಾಸಕ ಮಹೇಶ್ ಟೆಂಗಿನಕಾಯಿ,ಪಾಲಿಕೆಯ ಆಯುಕ್ತ ಡಾ ರುದ್ರೇಶ ಘಾಳಿ  ಅವರು ಹಂಚಿಕೆ ಮಾಡಿದರು

'ಸ್ಮಾರ್ಟ್ ಸಿಟಿ ಯೋಜನೆ ಅಡಿ ₹18 ಕೋಟಿ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಾಗಿದೆ. ಒಂದೊಂದು ಬ್ಲಾಕ್‌ ನಲ್ಲಿ 20 ಮನೆಗಳಿದ್ದು, ಪ್ರತಿ ಮನೆಗೆ ₹7.50 ಲಕ್ಷ ಖರ್ಚು ಮಾಡಲಾಗಿದೆ. ಲಿಫ್ಟ್, ಪಾರ್ಕಿಂಗ್, ಓವರ್ ಹೆಡ್ ಟ್ಯಾಂಕ್, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳಿವೆ. ವಿವಿಧ ಕಾರಣಗಳಿಂದಾಗಿ ಮೂರು ಲ್ಕು ವರ್ಷಗಳಿಂದ ಮನೆ ಹಂಚಿಕೆ ವಿಳಂಬವಾಗಿತ್ತು

'ರಸ್ತೆ ಕಾಮಗಾರಿಗೆ ಮನೆ ಕಳೆದುಕೊಳ್ಳುವ 45 ಕುಟುಂಬಗಳಿಗೆ ಮೊದಲ ಹಂತದಲ್ಲಿ ಮನೆಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿತ್ತು. ಆ ಪೈಕಿ 39 ಜನರಿಗೆ ಮನೆ ಹಂಚಿಕೆಯಾಗಿದೆ. ಇನ್ನುಳಿದ ಆರು ಜನರ ದಾಖಲೆ ಪರಿಶೀಲಿಸಿ ಎರಡರ ರು ದಿನಗಳಲ್ಲಿ ಹಂಚಿಕೆ ಮಾಡಲಾಗುವುದು. ಎರಡನೇ ಹಂತದಲ್ಲಿ ಉಳಿದ ಮನೆಗಳನ್ನು‌ ಹಂಚಿಕೆ ಮಾಡಲಾಗುವುದು. ಮನೆಗಳನ್ನು ಬೇರೆಯವರಿಗೆ ಬಾಡಿಗೆ ನೀಡದೆ ಫಲಾನುಭವಿಗಳೇ ಅಲ್ಲಿ ವಾಸ ಮಾಡಬೇಕು ಎಂದು ಹೇಳಿದರು.

'ಫಲಾನುಭವಿಗಳಲ್ಲಿ ಬಹುತೇಕರು ಕೂಲಿ ಕೆಲಸ ಮಾಡುತ್ತಾರೆ. ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಈ‌ಗ ಹಂಚಿಕೆಯಾದ ಮನೆಗಳಿಗಾಗಿ ಫಲಾನುಭವಿಗಳು ಯಾರಿಗೂ ಹಣ ನೀಡುವ ಅಗತ್ಯ ಇಲ್ಲ. ಈ ಮನೆಗಳನ್ನು ಉಚಿತವಾಗಿ ಹಂಚಿಕೆ ಮಾಡ ಲಾಗಿದೆ. ಅಲ್ಲಿನ ನಿವಾಸಿಗಳು ಸಂಘ ರಚಿಸಿಕೊಂಡು ಮನೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳ ಬೇಕು' ಎಂದರು.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮಾತನಾಡಿ, 'ವಸತಿ ಸಮುಚ್ಚಯದ ಬಳಿ ವಿದ್ಯುತ್‌ ಪರಿವರ್ತಕ ಅಳವಡಿಸಲಾಗಿದೆ‌. ವಿದ್ಯುತ್ ಸಂಪರ್ಕವನ್ನು ಫಲಾನುಭವಿಗಳ ಹೆಸರಿನಲ್ಲಿ ಪಡೆದು ಕೊಂಡು, ಸ್ಮಾರ್ಟ್ ವಿದ್ಯುತ್‌ ಮೀಟರ್ ಹಾಕಿಸಿಕೊಳ್ಳ ಬೇಕು. ಅದಕ್ಕೆ ₹10 ಸಾವಿರ ಖರ್ಚಾಗುತ್ತದೆ. ಅದನ್ನು ಫಲಾನುಭವಿಗಳೇ ಭರಿಸಬೇಕು' ಎಂದರು.

'ಮೂರ್ನಾಲ್ಕು ದಿನಗಳಲ್ಲಿ ಮನೆಗಳನ್ನು ಸ್ವಚ್ಛಗೊಳಿ ಸಲಾಗುವುದು. ಅಲ್ಲಿ ಒಡೆದಿರುವ ಕಿಟಕಿಗಳ ಗಾಜು ಸರಿಪಡಿಸಲಾಗುವುದು. ಫಲಾನುಭವಿಗಳು ನೂತನ ಮನೆಗಳಿಗೆ ಸ್ಥಳಾಂತರವಾದ ನಂತರ, ವಾಣಿವಿಲಾಸ ವೃತ್ತದಿಂದ ಬಿಆರ್‌ಟಿಎಸ್‌ ಡಿಪೊ‌ವರೆಗೆ ಇರುವ ಅವರ ಮೂಲ‌ಮನೆಗಳನ್ನು‌ ನೆಲಸಮ ಮಾಡಲಾಗುವುದು' ಎಂದು ತಿಳಿಸಿದರು.

ಈ ಒಂದು ಸಂದರ್ಭದಲ್ಲಿ ಸಿದ್ದು ಮೊಗಲಿಶೆಟ್ಟರ್, ಈಶ್ವರಗೌಡ ಪಾಟೀಲ, ರವಿ ನಾಯಕ್‌, ಮಹಾನಗರ ಪಾಲಿಕೆ ಅಧಿಕಾರಿಗಳು ಇದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....